ಪಾಟ್ನಾ: ಮನೆಯಲ್ಲಿ ಬಿದ್ದು ಬಲ ಭುಜದ ಮೂಳೆ ಮುರಿತಕ್ಕೊಳಗಾದ ಆರ್‌ಜೆಡಿ ಮುಖ್ಯಸ್ಥಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿಚಾರಿಸಿದ್ದಾರೆ.
ಆರ್‌ಜೆಡಿ ವಕ್ತಾರ (ಬಿಹಾರ) ಚಿತ್ರರಂಜನ್ ಗಗನ್, ಪ್ರಧಾನಿ ಮಂಗಳವಾರ ತೇಜಸ್ವಿ ಯಾದವ್ ಅವರೊಂದಿಗೆ ಮಾತನಾಡಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಆರ್‌ಜೆಡಿ ಮುಖ್ಯಸ್ಥರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ಹಾರೈಸಿದರು ಎಂದು ಹೇಳಿದ್ದಾರೆ.
ಬಿಹಾರದ ಮಾಜಿ ಮುಖ್ಯಮಂತ್ರಿ ಭಾನುವಾರ ಪಾಟ್ನಾದ ೧೦ ಸರ್ಕ್ಯುಲರ್ ರಸ್ತೆಯಲ್ಲಿರುವ ತಮ್ಮ ಮನೆಯ ಮೆಟ್ಟಿಲುಗಳಿಂದ ಕೆಳಗೆ ಬಿದ್ದು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರ ಸ್ಥಿತಿ ಸ್ಥಿರವಾಗಿದೆ.