ಮುಂಬೈ: ಸತತ ಎಂಟು ವರ್ಷಗಳಿಂದ ಬಿಜೆಪಿ ಸರ್ಕಾರವು ‘ಜೈ ಜವಾನ್, ಜೈ ಕಿಸಾನ್’ ಮೌಲ್ಯಗಳನ್ನು ಅವಮಾನಿಸಿದೆ ಎಂದು ಮಾಜಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಇನ್ನು ತೆಲಂಗಾಣ, ಕೇರಳ, ಬಿಹಾರ, ದೆಹಲಿ, ಉತ್ತಪ್ರದೇಶ ಹೀಗೆ ರಾಜ್ಯಗಳಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ಪ್ರತಿಭಟನೆಗಳು ವ್ಯಾಪಕವಾಗುತ್ತಿದ್ದು, ಈಗಾಗಲೇ ಹಲವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾಕಾರರ ಪ್ರತಿಭಟನೆ ವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಗೆ ಹಾನಿಯನ್ನುಂಟು ಮಾಡಿದ್ದಾರೆ.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಗಾಂಧಿ, “ಪ್ರಧಾನಿ ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂದು ನಾನು ಮೊದಲೇ ಹೇಳಿದ್ದೆ. ಅದೇ ರೀತಿ ‘ಮಾಫಿವೀರ್’ ಆಗುವ ಮೂಲಕ ದೇಶದ ಯುವಕರ ಬೇಡಿಕೆಯನ್ನು ಒಪ್ಪಿಕೊಂಡು ‘ಅಗ್ನಿಪಥ’ ಯೋಜನೆಯನ್ನು ಹಿಂಪಡೆಯಬೇಕು ಎಂದು ಮಾಜಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.