ವಾರಣಾಸಿ – ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ತವರು ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದು 1, 500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಮಾಡಲಿದ್ದಾರೆ. ಬಿಎಚ್ಯುನಲ್ಲಿ 100 ಹಾಸಿಗೆಗಳ ಎಂಸಿಎಚ್ ವಿಭಾಗ, ಗೋದೌಲಿಯಾದಲ್ಲಿ ಬಹು ಹಂತದ ಪಾರ್ಕಿಂಗ್, ಗಂಗಾ ನದಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ರೋ-ರೋ ನೌಕೆಗಳು ಮತ್ತು ವಾರಾಣಸಿ – ಘಾಜಿಪುರ ಹೆದ್ದಾರಿಯಲ್ಲಿನ ಮೂರು ಪಥದ ಫ್ಲೈಓವರ್ ಸೇರಿದಂತೆ ವಿವಿಧ ಸಾರ್ವಜನಿಕ ಯೋಜನೆಗಗಳನ್ನು ಅವರು ಉದ್ಘಾಟನೆಮಾಡಲಿದ್ದಾರೆ ಎಂದು ಪಿಎಂ ಕಚೇರಿ ಮೂಲಗಳು ಹೇಳಿವೆ. ಸುಮಾರು 744 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದರೆ, ಅದೆ ರೀತಿ 839 ಕೋಟಿ ರೂ. ಮೌಲ್ಯದ ಇತರೆ ಹಲವು ಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ಜಪಾನ್ ನೆರವಿನೊಂದಿಗೆ ನಿರ್ಮಿಸಲಾಗಿರುವ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮಾವೇಶ ಕೇಂದ್ರ – ರುದ್ರಕಾಶ್ ಅನ್ನು ಅವರು ಪ್ರಧಾನಿಯವರು ಉದ್ಘಾಟಿಸಿ ಬಳಿಕ ಕೊರೋನ ಸನ್ನದ್ಧತೆಯನ್ನು ಪರಿಶೀಲಿಸಲು ಅಧಿಕಾರಿಗಳು ಮತ್ತು ವೈದ್ಯಕೀಯ ಕ್ಷೇತ್ರದ ತಜ್ಞರ ಜೊತೆ ಸಮಾಲೋಚನೆ ನಡೆಸಲಿದ್ದಾರೆ.