ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದಿನಿಂದ ಎರಡು ದಿನಗಳ ಕಾಲ ರಾಜ್ಯಪ್ರವಾಸ ಕೈಗೊಳ್ಳಲಿದ್ದು, ಈ ಸಂಬಂಧ ಪ್ರಧಾನಿ ಮೋದಿ ಅವರು ಇಂದು ಐಎಎಫ್‍ನ ವಿಶೇಷ ವಿಮಾನದ ಮೂಲಕ ಯಲಹಂಕ ವಾಯುನೆಲೆಗೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ವಾಗತಿಸಿದ್ದಾರೆದಿನ್ನು ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತರಿದ್ದರು.
ಪ್ರಧಾನಿ ನರೇಂದ್ರ ಮೋದಿರವರು, ಅವರು ಜೂ.20 ಮತ್ತು ಜೂ.21ರಂದು ಬೆಂಗಳೂರು ಮತ್ತು ಮೈಸೂರಿನ ಹಲವಾರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಮೈಸೂರು ಮತ್ತು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಎಲ್ಲಾ ಸಚಿವರು, ಬಿಜೆಪಿ ಮುಖಂಡರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.
ವೈರಲ್ ಆಯ್ತು ಮೋದಿಯವರ ‘ಕನ್ನಡ’ ಟ್ವೀಟ್
“ಕರ್ನಾಟಕ ರಾಜ್ಯಕ್ಕೆ ಹೋಗುತ್ತಿರುವೆ. ಅಲ್ಲಿ ಬೆಂಗಳೂರು ಮತ್ತು ಮೈಸೂರಿನ ಕಾರ್ಯಕ್ರಮಗಳಲ್ಲಿ ಭಾಗವಹಿಸುವೆ. ಮೊದಲು ‘ಐಐಎಸ್‍ಸಿ ಬೆಂಗಳೂರು’, ಅಲ್ಲಿ ಮಿದುಳು ಸಂಶೋಧನಾ ಕೇಂದ್ರ ಉದ್ಘಾಟಿಸಲಾಗುವುದು. ಆನಂತರ, ಬಾಗ್ಚಿ- ಪಾರ್ಥಸಾರಥಿ ಮಲ್ಟಿಸ್ಪೆμÁಲಿಟಿ ಆಸ್ಪತ್ರೆಗಾಗಿ ಶಿಲಾನ್ಯಾಸ ನೆರವೇರಿಸಲಾಗುವುದು”
ಪ್ರಧಾನಮಂತ್ರಿ ನರೇಂದ್ರ ಮೋದಿ