ನಾಳೆ ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬೆಳಗಾಯಿತು ವಾರ್ತೆ
ಬಳ್ಳಾರಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪೊಲೀಸ್ ಕಾನ್‌ಸ್ಟೇಬಲ್ (ಕೆ.ಎಸ್.ಆರ್.ಪಿ, ಕೆ.ಎಸ್.ಐ.ಎಸ್.ಎಫ್, ಐ.ಆರ್.ಬಿ) ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ನಗರದ 23 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಬಳ್ಳಾರಿ ನಗರದಲ್ಲಿ ಒಟ್ಟು 14,059 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದು, ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸಲು ಜಿಲ್ಲಾಡಳಿತ ವ್ಯಾಪಕ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
*ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ:*
ಹೊರ ಊರುಗಳಿಂದ ಬರುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಸೆಪ್ಟೆಂಬರ್ 19 ರಿಂದ 20 ರವರೆಗೆ ನಗರದ ನಾಲ್ಕು ಪ್ರಮುಖ ಸ್ಥಳಗಳಲ್ಲಿ ವಸತಿ ಕಲ್ಪಿಸಲಾಗಿದೆ.
ಮಹಿಳೆಯರಿಗೆ: ಹೊಸಪೇಟೆ ರಸ್ತೆಯ ಡಾ. ಬಿ.ಆರ್. ಅಂಬೇಡ್ಕರ್ ಭವನ (ನೋಡಲ್ ಅಧಿಕಾರಿ: ಚಿದಾನಂದಪ್ಪ, ಮೊ: 9900223306).
ಪುರುಷರಿಗೆ: ಕೌಲ್ ಬಜಾರ್‌ನ ಬಾಬು ಜಗಜೀವನ್ ರಾಮ್ ಭವನ ಮತ್ತು ವಾಲ್ಮೀಕಿ ಭವನ (ನೋಡಲ್ ಅಧಿಕಾರಿ: ಶಾಷು, ಮೊ: 9942451535); ಹಾಗೆಯೇ ಕೌಲ್ ಬಜಾರ್‌ನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ (ನೋಡಲ್ ಅಧಿಕಾರಿ: ನಾಗೇಶ್, ಮೊ: 9986696487).
*ಅಭ್ಯರ್ಥಿಗಳಿಗೆ ಸೂಚನೆಗಳು ಹಾಗೂ ನಿಯಮಗಳು:*
ಮುಂಚಿತವಾಗಿ ಹಾಜರಾತಿ: ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಆರಂಭವಾಗುವ 2 ಗಂಟೆಗಳ ಮುಂಚಿತವಾಗಿಯೇ ಹಾಜರಾಗಬೇಕು. ಪ್ರವೇಶ ಪತ್ರದೊಂದಿಗೆ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿ (ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ) ತರುವುದು ಕಡ್ಡಾಯ.
200 ಮೀಟರ್ ನಿರ್ಬಂಧಿತ ಪ್ರದೇಶ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಜೆರಾಕ್ಸ್ ಹಾಗೂ ಇಂಟರ್ನೆಟ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ: ಪರೀಕ್ಷೆಗೆ ಸಂಬAಧಿಸಿದAತೆ ಸುಳ್ಳು ಸುದ್ದಿ ಅಥವಾ ವದಂತಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು 100ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಸಾಮಾಜಿಕ ಜಾಲತಾಣಗಳ ಮೇಲೆ ತೀವ್ರ ನಿಗಾ ಇರಿಸಿದ್ದಾರೆ.
*ಕೈಗೊಂಡ ಮುಂಜಾಗ್ರತಾ ಕ್ರಮಗಳು:*
ಪರೀಕ್ಷಾ ಗೌಪ್ಯ ಸಾಮಗ್ರಿಗಳ ರಕ್ಷಣೆಗಾಗಿ ಜಿಲ್ಲಾ ಖಜಾನೆಯ ಒಳಗೆ ಮತ್ತು ಹೊರಗೆ 24/7 ಸಿಸಿಟಿವಿ ಕಣ್ಗಾವಲು ಹಾಗೂ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ. ಪ್ರಶ್ನೆಪತ್ರಿಕೆ ವಿತರಣೆಗೆ ತ್ರಿಸದಸ್ಯ ಮಾರ್ಗಾಧಿಕಾರಿಗಳ 5 ತಂಡಗಳನ್ನು ಮತ್ತು ಪ್ರತಿ ಕೇಂದ್ರಕ್ಕೆ ಒಬ್ಬ ವೀಕ್ಷಕರನ್ನು ನೇಮಿಸಲಾಗಿದೆ.
ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದ್ದು, ಜೆಸ್ಕಾಂ ವತಿಯಿಂದ ತಡೆರಹಿತ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರತಿಯೊಂದು ಕೇಂದ್ರದಲ್ಲಿ ಆರೋಗ್ಯ ಇಲಾಖೆಯಿಂದ ಥರ್ಮಲ್ ಸ್ಕಾö್ಯನರ್, ಪಲ್ಸ್ ಆಕ್ಸಿಮೀಟರ್ ಮತ್ತು ಪ್ರಥಮ ಚಿಕಿತ್ಸಾ ಪೆಟ್ಟಿಗೆಯೊಂದಿಗೆ ಇಬ್ಬರು ಅರೆ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕೆಇಎ ಅಧಿಕೃತ ವೆಬ್‌ಸೈಟ್‌ಗೆ (http://kea.kar.nic.in) ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles