ಬಳ್ಳಾರಿಯಲ್ಲಿ ಪೊಲೀಸ್ ಧ್ವಜ ದಿನಾಚರಣೆ ಆಚರಣೆ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಗುರುವಾರ ಬೆಳಿಗ್ಗೆ 08 ಗಂಟೆಗೆ ನಗರದ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು (ಡಿಎಆರ್) ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆವನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಎಎಸ್ಪಿ, ಪಿಎಸ್ಐಗಳು ಹಾಗೂ ಪೊಲೀಸ್ ಪೆದೆಗಳು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು. ಧ್ವಜ ದಿನಾಚರಣೆಯ ಮಹತ್ವವನ್ನು ವಿವರಿಸಿ, ಪೊಲೀಸ್ ಸಿಬ್ಬಂದಿಯ ಸೇವಾ ಮನೋಭಾವ ಹಾಗೂ ಕರ್ತವ್ಯನಿಷ್ಠೆಯನ್ನು ಸ್ಮರಿಸಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಶಿಸ್ತು, ಸಮರ್ಪಣೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ಬದ್ಧರಾಗಿರುವುದಾಗಿ ಪ್ರತಿಜ್ಞೆ ಕೈಗೊಂಡರು. ಕಾರ್ಯಕ್ರಮದಲ್ಲಿ ಹಲವು ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದು, ಗೌರವಭಾವದಿಂದ ಧ್ವಜಕ್ಕೆ ವಂದನೆ ಸಲ್ಲಿಸಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles