ಬೆಳಗಾಯಿತು ವಾರ್ತೆ |www.bealagayithu.in
ಕುರುಗೋಡು : ದೊಡ್ಡಬಸವೇಶ್ವರ ದೇವಸ್ಥಾನದಲ್ಲಿ ನಟ ದರ್ಶನ್ ಭಾವಚಿತ್ರವಿಟ್ಟು, ಪೂಜೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಅರ್ಚಕ ಮಲ್ಲಿಕಾರ್ಜುನ ಅವರನ್ನು, ಕರ್ತವ್ಯಲೋಪ ಹಾಗೂ ಬೇಜವಾಬ್ದಾರಿತನದ ಆರೋಪದಲ್ಲಿ ಅಮಾನತುಗೊಳಿಸಲಾಗುವುದು ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ ಅವರು ಮಂಗಳವಾರ ಆದೇಶ ಹೊರಡಿಸಿದ್ದಾರೆ.





