ಬಳ್ಳಾರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ರಾಷ್ಟಿçÃಯ ಕುಟುಂಬ ಕಲ್ಯಾಣ ಕಾರ್ಯಕ್ರಮ ವಿಭಾಗದ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ “ವಿಪತ್ತಿನಲ್ಲೂ ಕುಟುಂಬ ಯೋಜನೆ ಸೇವೆ, ಸ್ವಾವಲಂಬಿ ರಾಷ್ಟç ಮತ್ತು ಕುಟುಂಬಕ್ಕೆ ಹಾದಿ” ಎಂಬ ಘೋಷವಾಕ್ಯದಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಜಾಗೃತಿ ರಥಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಮ್.ಡಿ.ಪವಿತ್ರ‍್ರಾ ಅವರು ಸೋಮವಾರ ಚಾಲನೆ ನೀಡಿದರು.
ಜಾಗೃತಿ ರಥಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿ ಜನಸಂಖ್ಯೆ ನಿಯಂತ್ರಣದಲ್ಲಿ ಇಲ್ಲಿಯವರೆಗೆ ನಾವು ಅಲ್ಪಮಟ್ಟಿಗೆ ಸಾಧನೆ ಮಾಡಿದ್ದೇವೆ. ನಮ್ಮ ಮುಂದಿರುವ ಸಮಸ್ಯೆ ಎಂದರೆ ಜನಸಂಖ್ಯಾ ಸ್ಥಿರತೆಯನ್ನು ಕಾಯ್ದುಕೊಳ್ಳುವುದಾಗಿದೆ ಎಂದರು.