ಕಬ್ಬು ಬೆಳೆಗಾರರು ಪ್ರತಿಭಟನೆ ನಿಲ್ಲಿಸುವಂತೆ ಪ್ರಲ್ಹಾದ್ ಜೋಶಿ ಮನವಿ

ಬೆಳಗಾಯಿತು ವಾರ್ತೆ
ದೆಹಲಿ: ಕಬ್ಬಿಗೆ ಎಂಎಸ್‌ಪಿ (MSP) ದರ ನಿಗದಿಗೆ ಆಗ್ರಹಿಸಿ ರಾಜ್ಯದಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರೈತರಲ್ಲಿ ಸುಗಮ ಸಂಧಾನಕ್ಕೆ ಮನವಿ ಮಾಡಿದ್ದಾರೆ. “ಸರ್ಕಾರ ರೈತರ ಪರವಾಗಿದ್ದು, ಉದ್ವೇಗಕ್ಕೆ ಒಳಗಾಗದೆ ಪ್ರತಿಭಟನೆ ಕೈಬಿಡಬೇಕು” ಎಂದು ವಿನಂತಿಸಿದರು.
ರಾಜ್ಯ ಆಡಳಿತ ಬೆಲೆ (SAP) ನಿಗದಿ, ತೂಕದಲ್ಲಿ ಆಗುವ ಮೋಸ ಹಾಗೂ ರಿಕವರಿ ರೇಟ್ ಸಮಸ್ಯೆಗಳ ಕುರಿತು ರಾಜ್ಯ ಸರ್ಕಾರದ ಸಚಿವರೊಂದಿಗೆ ಚರ್ಚಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು. ಎಥೆನಾಲ್ ಬ್ಲೆಂಡಿAಗ್ ಪ್ರಮಾಣವನ್ನು ಶೇ. 1.5 ರಿಂದ ಶೇ. 20 ಕ್ಕೆ ಹೆಚ್ಚಿಸಲಾಗಿದ್ದು, ಸರ್ಕಾರ ರೈತರ ಹಿತರಕ್ಷಣೆಗೆ ಬದ್ಧವಾಗಿದೆ. ರಸ್ತೆ ತಡೆಯುವ ಬದಲು ಮಾತುಕತೆಯ ಮೂಲಕವೇ ಪ್ರತಿಯೊಂದು ಸಮಸ್ಯೆಯನ್ನೂ ಆದಷ್ಟು ಬೇಗ ಪರಿಹರಿಸಿಕೊಳ್ಳೋಣ ಎಂದು ಜೋಶಿ ತಿಳಿಸಿದರು.
ಮುನ್ನೆಚ್ಚರಿಕಾ ಕ್ರಮವಾಗಿ ಹುಬ್ಬಳ್ಳಿಯ ಮಯೂರಿ ಎಸ್ಟೇಟ್‌ನಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ರೈತರಿಂದ ಜೋಶಿ ನಿವಾಸಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯಿರುವುದರಿಂದ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಎತ್ತರದ ಬ್ಯಾರಿಕೇಡ್‌ಗಳನ್ನು ನಿರ್ಮಿಸಲಾಗಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles