ಪಾಲಿಕೆ ಸದಸ್ಯ ಕುಬೇರ ವಿರುದ್ಧ ನಡೆದ ಪ್ರತಿಭಟನೆ ಅಂತ್ಯ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಕಳೆದ ಮೂರು ದಿನಗಳಿಂದ ನಗರದ ಮಾಹಾನಗರ ಪಾಲಿಕೆ ಮುಂಭಾಗದಲ್ಲಿ ಪಾಲಿಕೆ ಸದಸ್ಯ ಕುಬೇರ ಅವರ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿ
ಸೋಮವಾರ ಅಂತ್ಯಗೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಧರಣಿ ಸ್ಥಳಕ್ಕೆ ಭೇಟಿ ನೀಡಿದ ಸೂರ್ಯನಾರಾಯಣ ರೆಡ್ಡಿ ಅವರು ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಆರೋಪಿಯ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಯಾವುದೇ ನೌಕರರು ಭಯಪಡಬೇಕಿಲ್ಲ, ಧೈರ್ಯದಿಂದ ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಪ್ರತಿಭಟನೆ ಮುಂದುವರಿದರೆ ಬಳ್ಳಾರಿ ನಗರದ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ ಎಂಬುದನ್ನು ಮನಗಂಡು, ಧರಣಿಯನ್ನು ಇಲ್ಲಿಗೇ ನಿಲ್ಲಿಸುವಂತೆ ಮನವಿ ಮಾಡಿದರು. ಅವರ ಮನವಿಗೆ ಸ್ಪಂದಿಸಿದ ನೌಕರರು ಪ್ರತಿಭಟನೆ ಕೈಬಿಟ್ಟು ಶಾಂತಿಯುತವಾಗಿ ಹಿಂಪಡೆಯಲು ಒಪ್ಪಿದರು.
ಇದರಿಂದಾಗಿ ಮೂರು ದಿನಗಳಿಂದ ನಡೆಯುತ್ತಿದ್ದ ಉದ್ವಿಗ್ನ ಪರಿಸ್ಥಿತಿ ಶಮನಗೊಂಡಿದ್ದು, ನಗರದಲ್ಲಿ ಸಾಮಾನ್ಯ ಸ್ಥಿತಿ ಮರಳಿ ಬಂದಿದೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles