ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ವನ್ನು ಅಸ್ಥಿರಗೊಳಿಸುವ ಪ್ರಯತ್ನ ಕೇಂದ್ರ ಸರ್ಕಾರದಿಂದ ಹಾಗೂ ವಿರೋಧಪಕ್ಷಗಳಿಂದ ಷಡ್ಯಂತ್ರ ನೆಡೆಯುತ್ತಿದೆ ಎಂದು ಆರೋಪಿಸಿ, ಸಿದ್ದರಾಮಯ್ಯ ಅವರನ್ನು ಬೆಂಬಲಿಸುವ ಸಲುವಾಗಿ, ಸೋಮವಾರ ನಗರದಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು.
ನಗರದ ಗಾಂಧಿಭವನದ ಬಳಿ ಸೇರಿದ ಸಂಸದ ಈ. ತುಕರಾಂ, ಶಾಸಕರಾದ ಗಣೇಶ್, ಭರತ್ ರೆಡ್ಡಿ, ಮೇಯರ್ ಮುಲ್ಲಂಗಿ ನಂದೀಶ್, ಬುಡಾ ಅಧ್ಯಕ್ಷ ಆಂಜನೇಯಲು, ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಲಾರಿ ಮಾಲೀಕರ ಸಂಘದ ಅಧ್ಯಕ್ಷ ಮಿಂಚು ಶ್ರೀನಿವಾಸುಲು, ಪಾಲಿಕೆ ಸದಸ್ಯರಾದ ಪ್ರಭಂಜನ್ ಕುಮಾರ್, ಹಾಗೂ ವಿವಿಧ ಸಂಘಟನೆಗಳ ಮತ್ತು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
https://youtu.be/W0QHejIr5Ak





