ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನಾಕಾರರ ಭೇಟಿ: ಸ್ಯಾನಿಟರಿ ಪ್ಯಾಡ್‌ಗಳ ವಿತರಣೆ

ಬೆಳಗಾಯಿತು ವಾರ್ತೆ
ಬೆಂಗಳೂರು: ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಫೆವಾರ್ಡ್-ಕೆ ಮಹಿಳಾ ವೇದಿಕೆಯ ಸದಸ್ಯರು ನೈತಿಕ ಬೆಂಬಲ ಸೂಚಿಸಿದರು.

ಈ ಹಿನ್ನೆಲೆಯಲ್ಲಿ ಮಹಿಳಾ ವೇದಿಕೆಯ ಪದಾಧಿಕಾರಿಗಳು ಸ್ವಾತಂತ್ರ್ಯ ಉದ್ಯಾನವನಕ್ಕೆ ಭೇಟಿ ನೀಡಿ, ಹೋರಾಟ ನಿರತ ಆಶಾ ಕಾರ್ಯಕರ್ತೆಯರನ್ನು ಭೇಟಿಯಾಗಿ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಫೆವಾರ್ಡ್-ಕೆ ರಾಜ್ಯಾಧ್ಯಕ್ಷ ಮಹೇಶಂದ್ರ ಗುರು, ನಿಕಟಪೂರ್ವ ಅಧ್ಯಕ್ಷ ಆಂಜನೇಯ ರೆಡ್ಡಿ ಹಾಗೂ ಫೆವಾರ್ಡ್-ಕೆ ಮಹಿಳಾ ವೇದಿಕೆಯ ರಾಜ್ಯ ಸಂಚಾಲಕರು ಮತ್ತು ಫೆವಾರ್ಡ್-ಕೆ ಸ್ಟೇಟ್ ಬೋರ್ಡ್ ಸದಸ್ಯೆ ಕೆ. ಪುಷ್ಪ ಚಂದ್ರಶೇಖರ್ ಅವರು ಆಶಾ ಕಾರ್ಯಕರ್ತೆಯರನ್ನು ಉದ್ದೇಶಿಸಿ ಮಾತನಾಡಿ, “ನಿಮ್ಮ ನ್ಯಾಯಯುತ ಹೋರಾಟದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ. ನಿಮ್ಮ ಬೇಡಿಕೆಗಳ ಈಡೇರಿಕೆಗೆ ನಡೆಯುತ್ತಿರುವ ಹೋರಾಟಕ್ಕೆ ನಮ್ಮ ಸಂಪೂರ್ಣ ನೈತಿಕ ಬೆಂಬಲವಿದೆ” ಎಂದು ಧೈರ್ಯ ತುಂಬಿದರು.

ಇದೇ ಸಂದರ್ಭದಲ್ಲಿ ಹೋರಾಟದಲ್ಲಿ ಭಾಗವಹಿಸಿದ್ದ ಆಶಾ ಕಾರ್ಯಕರ್ತೆಯರಿಗೆ ಮಹಿಳಾ ವೇದಿಕೆಯ ವತಿಯಿಂದ ಸುಮಾರು 3,000 ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಪ್ರೇಮ ಎ.ಎಸ್., ಸಹ ಸಂಚಾಲಕಿ ಅನಿತಾ ಕೆ.ಎನ್., ಮಂಡ್ಯ ಜಿಲ್ಲಾ ಫೆವಾರ್ಡ್-ಕೆ ಘಟಕದ ರಾಣಿ ಚಂದ್ರಶೇಖರ್, ನಳಿನಿ, ಬೆಂಗಳೂರು ನಗರ ಜಿಲ್ಲಾ ಘಟಕದ ಡಾ. ಸೀಮಾ, ಚಿತ್ರದುರ್ಗ ಜಿಲ್ಲಾ ಘಟಕದ ಅನ್ನಪೂರ್ಣ ಮತ್ತು ಸಮೀರ ಹಾಗೂ ಕಾರ್ಯಾಲಯದ ಕಾರ್ಯಕ್ರಮಗಳ ಜವಾಬ್ದಾರಿ ನಿರ್ವಹಿಸುವ ಕೃಷ್ಣಮೂರ್ತಿ ಎಂ.ಎಸ್. ಸೇರಿದಂತೆ ಹಲವರು ಉಪಸ್ಥಿತರಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles