ಕೊಲಂಬೊ: ಆರ್ಥಿಕ ಬಿಕ್ಕಟ್ಟಿನಿಂದ ಜರ್ಜರಿತವಾಗಿರುವ ಶ್ರೀಲಂಕಾದಲ್ಲಿ ಪ್ರತಿಭಟನಾಕಾರರು ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಅವರ ನಿವಾಸವನ್ನು ಆಕ್ರಮಿಸಿಕೊಂಡಿದ್ದಾರೆ. ಈ ಸುದ್ದಿ ಅರಿತ ಬಳಿಕ ಅಧ್ಯಕ್ಷರಾಗಿರುವ ಗೋಟಬಾಯ ಅವರು ತಮ್ಮ ನಿವಾಸದಿಂದ ಪಲಾಯನ ಮಾಡಿದ್ದಾರೆಂದು ರಕ್ಷಣಾ ಮೂಲಗಳು ತಿಳಿಸಿವೆ. ಇದೇ ವೇಳೆ ಸಂಸದೆ ರಜಿತಾ ಸೇನಾರತ್ನೆ ಮನೆ ಮೇಲೂ ಪ್ರತಿಭಟನಾಕಾರರು ದಾಳಿ ನಡೆಸಿದ್ದಾರೆ. ಕೊಲಂಬೊದಲ್ಲಿರುವ ರಾಜಪಕ್ಸೆ ಅವರ ಅಧಿಕೃತ ನಿವಾಸವನ್ನು ಸದ್ಯ ಪ್ರತಿಭಟನಾಕಾರರ ಗುಂಪು ಸುತ್ತುವರಿದಿದೆ.
ಮತ್ತೊಂದೆಡೆ, ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಪರಿಸ್ಥಿತಿಯನ್ನು ಚರ್ಚಿಸಲು ಮತ್ತು ತ್ವರಿತ ಪರಿಹಾರಕ್ಕಾಗಿ ಪಕ್ಷದ ನಾಯಕರ ತುರ್ತು ಸಭೆಯನ್ನು ಕರೆದಿದ್ದಾರೆ. ಸಂಸತ್ ಅಧಿವೇಶನ ಕರೆಯುವಂತೆ ಪ್ರಧಾನಿ ವಿಕ್ರಮಸಿಂಘೆ ಸ್ಪೀಕರ್‌ಗೆ ಮನವಿ ಮಾಡಿದ್ದಾರೆ. ಪತ್ರದಲ್ಲಿ ಶ್ರೀಲಂಕಾ ಪೊದುಜನ ಪೆರಮುನಾ (ಎಸ್‌ಎಲ್‌ಪಿಪಿ)ಯ ೧೬ ಸಂಸದರು ಅಧ್ಯಕ್ಷ ಗೊಟಬಾಯ ರಾಜಪಕ್ಸೆ ಅವರನ್ನು ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.