ಬೆಂಗಳೂರು: ಅಗ್ನಿಪಥ ಯೋಜನೆ ಖಂಡಿಸಿ ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ಮಾಡಬೇಕು ಎಂದು ಪಕ್ಷದ ನಾಯಕರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ. ಯುವಕರಿಗೆ ದೊಡ್ಡ ಅನ್ಯಾಯವಾಗುತ್ತಿದ್ದು, ಪ್ರತಿಭಟನೆ ಅನಿವಾರ್ಯ. ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸದಾಶಿವನಗರ ನಿವಾಸದ ಬಳಿ ಯೋಜನೆ ಕೈಬಿಡುವ ಚಿಂತನೆ ಇಲ್ಲ ಎಂಬ ಕೇಂದ್ರ ಸರ್ಕಾರದ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರ ಏನಾದರೂ ಹೇಳಲಿ. ನಾವು ನಮ್ಮ ವಿಚಾರವನ್ನು ವ್ಯಕ್ತಪಡಿಸುತ್ತೇವೆ. “ಬಿಜೆಪಿ ಪಕ್ಷದವರ ಮಕ್ಕಳು ಮಾತ್ರ ವೈದ್ಯರು, ಇಂಜಿನಿಯರ್, ಪ್ರೊಫೆಸರ್ ಆಗಬೇಕು, ಬಡವರ ಮಕ್ಕಳು ಸೆಕ್ಯೂರಿಟಿ ಗಾರ್ಡ್ ಆಗಬೇಕಾ? ಇದು ಸರಿಯಿಲ್ಲ. ಸೇನೆಗೆ ಯುವಕರನ್ನು ತೆಗೆದುಕೊಳ್ಳಲಿ. ಆದರೆ ಪೂರ್ಣಾವಧಿಗೆ ತೆಗೆದುಕೊಂಡು ಅವರು ನಿವೃತ್ತಿಯಾಗುವವರೆಗೂ ಸೇವೆಗೆ ಅವಕಾಶ ನೀಡಲಿ. ಇಷ್ಟು ದಿನ ಹೇಗಿತ್ತೋ ಹಾಗೆಯೇ ನೇಮಕ ಮಾಡಲಿ ಎಂದು ತಿಳಿಸಿದರು.