ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನವಜೋತ್ ಸಿಂಗ್ ಸಿಧು ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರದಲ್ಲಿ, “ಪಂಜಾಬ್‌ನ ಭವಿಷ್ಯ ಮತ್ತು ಪಂಜಾಬ್‌ನ ಕಲ್ಯಾಣಕ್ಕಾಗಿ ನಾನು ಎಂದಿಗೂ ರಾಜಿ ಮಾಡಿಕೊಳ್ಳಲಾರೆ” ಎಂದು ಸಿಧು ತಿಳಿಸಿದ್ದಾರೆ. ಹಾಗೂ ತಾವು ಕಾಂಗ್ರೆಸ್ ಸೇವೆ ಮುಂದುವರಿಸುವುದಾಗಿಯೂ ಹೇಳಿದ್ದಾರೆ.
ಈ ಬೆಳವಣಿಗೆಯ ಬೆನ್ನಲ್ಲೇ, ಸಿಧು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿರುವ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್, “ಆತ ಸ್ಥಿತ ವ್ಯಕ್ತಿತ್ವದವನಲ್ಲ” ಎಂದಿದ್ದಾರೆ.