ದುಬೈ, ಅ.1 (ಯುಎನ್ಐ)- ನಾಯಕ ಕೆ.ಎಲ್ ರಾಹುಲ್ (67 ರನ್) ಇವರ ಸೊಗಸಾದ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಕಿಂಗ್ಸ್ 14ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮಣಿಸಿ, ಪೂರ್ಣ ಅಂಕ ಕಲೆ ಐದನೇ ಸ್ಥಾನಕ್ಕೆ ಬಡ್ತಿ ಪಡೆದಿದೆ.
ಮೊದಲು ಬ್ಯಾಟ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 7 ವಿಕೆಟ್ ಗೆ 165 ರನ್ ಸೇರಿಸಿದರು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಪಂಜಾಬ್ 19.3 ಓವರ್ ಗಳಲ್ಲಿ 5 ವಿಕೆಟ್ ಗೆ 168 ರನ್ ಸೇರಿಸಿ ಜಯ ಸಾಧಿಸಿತು.