ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾರವರನ್ನು ನವದೆಹಲಿಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಅವರು ಭೇಟಿಯಾಗಿ ಬರುವ ಲೋಕಸಭೆ ಚುನಾವಣೆ ಕುರಿತು ಚರ್ಚೆ ಮಾಡಲಾಯಿತು.
ಬಳ್ಳಾರಿಯಲ್ಲಿ ಬಿಜೆಪಿಗೆ ಉತ್ತಮ ಪ್ರತಿಕ್ರಿಯೆ ಇದೆ. ಈ ಬಾರಿ ನಮಗೆ ಯಾವುದೇ ಭಯವಿಲ್ಲ. ನಾವು ಲೋಕಸಭೆಯಲ್ಲಿ ಜಯ ಸಾಧಿಸುತ್ತೆವೆ ಎಂದು ಅವರು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜೊತೆಗೆ ಹಾಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.