ಬಳ್ಳಾರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಬಳ್ಳಾರಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಕೀಲರಾದ ಶೇಖರ್ ಅವರ ಮಾತನಾಡಿ ಕಳೆದ ಎರಡು ವರ್ಷಗಳಿಂದ ಅಕ್ರಮ ಮರಳು ಸಾಗಣೆ ಆರೋಪದ ಮೇಲೆ ಅಂಜಿನಪ್ಪ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ಜಿಲ್ಲಾ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಎಸ್ ಹೆಚ್ ಪುಷ್ಪಾಂಜಲಿ ದೇವಿಯವರು ನೇತೃತ್ವದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಪ್ರಕರಣ ಇತ್ಯರ್ಥ ಪಡಿಸಿದರು ಎಂದು ಹೇಳಿದರು.