ಆರ್‌ಸಿಬಿ ತಂಡದ ಕ್ರಿಕೆಟ್ ನಿರ್ದೇಶಕ ಮೈಕ್ ಹೆಸನ್ ಹಾಗೂ ಕೋಚ್ ಸಂಜಯ್ ಬಂಗಾರ್ ಅವರ ಕಾರ್ಯಾವಧಿ ಅಂತ್ಯವಾಗಿದ್ದು ಮುಂದಿನ ಆವೃತ್ತಿಗೆ ಹೊಸ ಮ್ಯಾನೇಜ್‌ಮೆಂಟ್‌ನೊಂದಿಗೆ ಆರ್‌ಸಿಬಿ ತಂಡ ಕಣಕ್ಕಿಳಿಯುವುದು ಖಚಿತ. ಈ ಸಂದರ್ಭದಲ್ಲಿ ಆರ್‌ಸಿಬಿ ತಂಡದ ಮುಂದಿನ ಕೋಚ್ ಯಾರಾಗಬಹುದು ಎಂಬ ಪ್ರಶ್ನೆ ತಂಡದ ಅಭಿಮಾನಿಗಳಲ್ಲಿ ಸಾಕಷ್ಟು ಕಾಡುತ್ತಿತ್ತು. ಈ ವಿಚಾರವಾಗಿ ಅಧಿಕೃತ ಮಾಹಿತಿಯನ್ನು ಈಗ ಸ್ವತಃ ಆರ್‌ಸಿಬಿ ಫ್ರಾಂಚೈಸಿ ನೀಡಿದ್ದು ಮುಖ್ಯ ಕೋಚ್ ಆಗಿ ನೇಮಕಗೊಳಿಸಲಾಗಿದೆ ಎಂದು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದೆ.
ಜಿಂಬಾಬ್ವೆ ಕ್ರಿಕೆಟ್ ತಂಡದ ಮಾಜಿ ನಾಯಕ ದಿಗ್ಗಜ ಕ್ರಿಕೆಟಿಗ ಹಾಗೂ ಕೋಚ್ ಆಗಿ ಸಾಕಷ್ಟು ಖ್ಯಾತಿ ಪಡೆದಿರುವ ಆಂಡಿ ಫ್ಲವರ್ ಆರ್‌ಸಿಬಿ ತಂಡದ ಮುಂದಿನ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸಲು ನೇಮಕವಾಗಿದ್ದಾರೆ. ಸ್ವತಃ ಆರ್‌ಸಿಬಿ ಫ್ರಾಂಚೈಸಿ ಈ ಬಗ್ಗೆ ಅಧಿಕೃತ ಮಾಹಿತಿ ನೀಡಿದ್ದು ಸಾಕಷ್ಟು ಮಾತುಕತೆಗಳ ನಂತರ ಈ ನಿರ್ಧಾರವನ್ನು ಅಂತಿಮಗೊಳಿಸಲಾಗಿದೆ.