ಬಳ್ಳಾರಿ: ಮಹಾಮಾರಿ ಕೊರೊನಾ ಸಂಕಷ್ಟ ಕಾಲದಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ನವರ ರಾಜೀನಾಮೆ ವಿಚಾರ ಅಪ್ರಸ್ತುತ. ಇಂಥಹ ಬೆಳವಣಿಗೆ ನಡಿಬಾರದಿತ್ತು ಎಂದು ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಬೇಸರ ವ್ಯಕ್ತಪಡಿಸಿದ್ದಾರೆ.
ಬಳ್ಳಾರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಗಾಲಿ ಸೋಮಶೇಖರ ರೆಡ್ಡಿ ಅವರು, ಸಿಎಂ ಬಿ.ಎಸ್. ಯಡಿಯೂರ ಪ್ಪನವರು ನಮ್ಮೆಲ್ಲರ ಪ್ರಶ್ನಾತೀತ ನಾಯಕ ರಾಗಿದ್ದಾರೆ. ಬಿಎಸ್ ಯಡಿಯೂರಪ್ಪನವರು ಸಿಎಂ ಆಗಿ ಅವಧಿ ಪೂರ್ಣಗೊಳಿಸುತ್ತಾರೆ. ಅದರಲ್ಲೇನು ಎರಡು ಮಾತಿಲ್ಲ. ಆದರೆ, ಕೋವಿಡ್ ಸಂದರ್ಭದಲ್ಲಿ ಈ ರಾಜಕೀಯ ಬೆಳವಣಿಗೆ ಸರಿಯಲ್ಲ. ಪ್ರತಿಯೊಬ್ಬ ಶಾಸಕರು ಕೋವಿಡ್ ನಿಯಂತ್ರಣಕ್ಕೆ ಹೋರಾಡಬೇಕೆಂದು ಮನವಿ ಮಾಡಿದ್ದಾರೆ ಶಾಸಕ ಗಾಲಿ ಸೋಮಶೇಖರ ರೆಡ್ಡಿ.