ಬಳ್ಳಾರಿ: ರೆಡ್ಡಿ ಪ್ರಾಧಿಕಾರ ಸ್ಥಾಪನೆಗೆ ಸರ್ಕಾರದ ಹತ್ತಿರ ನಿಯೋಗ ತೆಗೆದುಕೊಂಡು ಹೋಗುವೆ ಎಂದು ಸಚಿವ ನಾಗೇಂದ್ರ ಅವರು ಹೇಳಿದರು.
ನಗರದಲ್ಲಿನ ಬಿ.ಡಿ.ಎ.ಎ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ವತಿಯಿಂದ ವೇಮನ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ನಗರದಲ್ಲಿ ತಾಳೂರು ರಸ್ತೆಯ ಮಹಾಯೋಗಿ ವೇಮನ ಅವರ ಹೆಸರನ್ನು ನಾಮಕರಣ ಮಾಡುವ ಚರ್ಚೆ ನಡೆಸಲಾಗುವುದು ಹಾಗೂ ನಗರದಲ್ಲಿ ನಿರ್ಮಾಣವಾಗುತ್ತಿರುವ ಮೆಣಸಿನಕಾಯಿ ಚಿಲ್ಲಿ ಮಾರುಕಟ್ಟೆಗೆ ರೆಡ್ಡಿ ವೇಮನ ಮಾರುಕಟ್ಟೆ ಎಂದು ನಾಮಕರಣ ಮಾಡಲಾಗುವುದು ಎಂದರು.
ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ ರೆಡ್ಡಿ ಸಮುದಾಯದ ಅಭಿವೃದ್ಧಿಗೆ ರೆಡ್ಡಿ ಪ್ರಾಧಿಕಾರ ಸ್ಥಾಪನೆ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.
ರೆಡ್ಡಿ ಜನ ಸಂಘದ ಅಧ್ಯಕ್ಷರಾದ ನಾರಾ ಪ್ರತಾಪ ರೆಡ್ಡಿ ಅವರು ಮಾತನಾಡಿ ನಗರದಲ್ಲಿನ ತಾಳೂರು ರಸ್ತೆಗೆ ಮಹಾಯೋಗಿ ವೇಮನ ಅವರ ಹೆಸರನ್ನು ನಾಮಕರಣ ಮಾಡಬೇಕು ಎಂದರು.ರೆಡ್ಡಿ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮೇಯರ್ ಶ್ವೇತಾ,ಎಡಿಸಿ ಮೊಹಮ್ಮದ್ ಜುಬೇರ್, ಸಿಇಒ ರಾಹುಲ್ ಶರಣಪ್ಪ ಸಂಕನೂರ್, ಸಹಾಯಕ ಆಯುಕ್ತರಾದ ಹೇಮಂತ್ ಕುಮಾರ್ ಸೇರಿದಂತೆ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.