ಬೆಳಗಾಯಿತು ವಾರ್ತೆ |www.bealagayithu.in
ಬಳ್ಳಾರಿ: ಮುಡಾ ಹಗರಣ ಮತ್ತು ಎಸ್ಟಿ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಆರೋಪ ಕೇಳಿ ಬಂದಿದೆ ಆದ್ದರಿಂದ ನೈತಿಕ ಹೊಣೆ ಹೊತ್ತು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಿ ಕಾನೂನು ಹೋರಾಟ ಮಾಡಿ ಕೋರ್ಟ್ ನಲ್ಲಿ ಕ್ಲೀನ್ ಚಿಟ್ ಪಡೆಯಿರಿ ಎಂದು ಮಾಜಿ ಸಂಸದ ಮುನಿಸ್ವಾಮಿ ಅವರು ಒತ್ತಾಯಿಸಿದ್ದಾರೆ.
ನಗರದ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾನೂನಿನ ಮುಂದೆ ಎಲ್ಲರೂ ಸಮಾನರು ಈ ಹಿಂದೆ ರಾಮಕೃಷ್ಣ ಹೆಗಡೆ, ಬಂಗಾರಪ್ಪ, ಯಡಿಯೂರಪ್ಪ ಅವರು ಸಹ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾನೂನು ರೀತಿಯಲ್ಲಿ ತನಿಖೆ ನಡೆದು ಕ್ಲೀನ್ ಚಿಟ್ ಪಡೆದ ನಂತರ ಮುಖ್ಯಮಂತ್ರಿಗಳಾಗಿ ಮುಂದುವರಿದಿದ್ದಾರೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಮುಡಾ ಅಕ್ರಮ ಕುರಿತು ಆರೋಪ ಬಂದ ಹಿನ್ನೆಲೆಯಲ್ಲಿ ರಾಜ್ಯಪಾಲರು ತನಿಖೆ ಅನುಮತಿ ನೀಡಿದ್ದಾರೆ. ಅದಕ್ಕಾಗಿ ಅವರ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್, ಡಾ. ಮಹಿಪಾಲ್, ಗಣಪಾಲ್ ಐನಾಥ ರೆಡ್ಡಿ, ಓಬಳೇಶ್, ಸಿದ್ದಪ್ಪ ಸೇರಿದಂತೆ ಮತ್ತಿತರರು ಇದ್ದರು.





