ಲಂಡನ್: ಬ್ರಿಟನ್ ಪ್ರಧಾನ ಮಂತ್ರಿ ಗಾದಿಗೆ ಪೈಪೋಟಿ ಶುರುವಾಗಿದ್ದು, ಭಾರತೀಯ ಮೂಲದ ರಿಷಿ ಸುನಕ್ ಎರಡನೇ ಸುತ್ತಿನಲ್ಲೂ ಮುನ್ನಡೆ ಸಾಧಿಸಿದ್ದಾರೆ. ಸುನಕ್ ನಂತರ ಪೆನ್ನಿ ಮೊರ್ಡಾಂಟ್ ಎರಡನೇ ಸ್ಥಾನದಲ್ಲಿದ್ದಾರೆ.
ರಿಷಿ ಸುನಕ್ ಅವರು ವ್ಯಾಪಾರ ಮತ್ತು ವ್ಯವಹಾರ ಸಚಿವ ಪೆನ್ನಿ ಮೊರ್ಡಾಂಟ್ ಮತ್ತು ವಿದೇಶಾಂಗ ಸಚಿವ ಲಿಜ್ ಟ್ರಸ್ ಅವರ ವಿರುದ್ಧ ಸ್ಪರ್ಧೆಗಿಳಿದಿದ್ದಾರೆ. ಗುರುವಾರ ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಹೆಚ್ಚು ಮತಗಳನ್ನು ಗಳಿಸಿದ್ದಾರೆ ಮತ್ತು ಬೋರಿಸ್ ಜಾನ್ಸನ್ ನಂತರ ಕನ್ಸರ್ವೇಟಿವ್ ಪಕ್ಷದ ನಾಯಕರಾಗಲು ಮುಂಚೂಣಿಯಲ್ಲಿದ್ದಾರೆ. ರಿಷಿ ಸುನಕ್ ೧೦೧ ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ೮೩ ಮತಗಳನ್ನು ಗಳಿಸಿದರು. ಇದರರ್ಥ ರಿಷಿ ಸುನಕ್ ಅವರ ಪಕ್ಷದ ಮೇಲೆ ಬಲವಾದ ಹಿಡಿತ ಸಾಧಿಸಿದ್ದಾರೆ.