ಬೆಂಗಳೂರು: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ನಿರ್ಮಿಸುವ ಯೋಜನೆ ಕುರಿತ ಪ್ರಸ್ತಾಪನೆ ಪರಿಶೀಲನೆ ಹಂತದ್ದಲ್ಲಿದ್ದು, ಆದಷ್ಟು ಬೇಗ ಈ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಂ ವೀರಭದ್ರ ಪ್ರಶ್ನೆಗೆ ಉತ್ತರಿಸಿದ ಸಚಿವರು,ಅಂಜನಾದ್ರಿ ಬೆಟ್ಟಕ್ಕೆ ರೋಪ್ ವೇ ಕಲ್ಪಿಸುವ ಕುರಿತು ಜಿಲ್ಲಾಧಿಕಾರಿ,ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಿಂದ ಪ್ರಸ್ತಾವನೆ ಬಂದಿದೆ. ಇದರ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.
ಫೀಜಿಬಿಲಿಟಿ ವರದಿ ಬಂದಿದೆ,ಇರುವ ನಿಯಮಾವಳಿ ಪ್ರಕಾರ, ಭೌತಿಕ ಮತ್ತು ರಕ್ಷಣೆ ಸಂಬಂಧ ವರದಿ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದ ಸಮಿತಿ ಮುಂದೆ ಬರಲಿದೆ, ಆರ್ಥಿಕ ಮಿತಿ ಇತ್ಯಾದಿ ಕುರಿತು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಆನಂದ್ ಸಿಂಗ್ ಭರವಸೆ ನೀಡಿದರು.