ಬಳ್ಳಾರಿ: 2024ರ ನೂತನ ವರ್ಷದ ಆಚರಣೆ ಹಿನ್ನೆಲೆ ಜಿಲ್ಲೆಯಲ್ಲಿನ ವಿವಿಧ ಪ್ರದೇಶದಿಂದ ನಗರದಲ್ಲಿನ ಡಾ. ರಾಜ್ ಕುಮಾರ್ ಉದ್ಯಾನವನಕ್ಕೆ ನೂರಾರು ಜನರು ಕುಟುಂಬ ಸಮೇತರಾಗಿ ಬಂದು ನೂತನ ವರ್ಷದ ಸಂಭ್ರಮಾಚರಣೆ ಮಾಡಿದರು.
ನಗರದ ಹೃದಯ ಭಾಗದಲ್ಲಿರುವ ಡಾ.ರಾಜ್ ಕುಮಾರ್ ಉದ್ಯಾನವನದಲ್ಲಿ ಕುಟುಂಬ ಸಮೇತರಾಗಿ, ಸ್ನೇಹಿತರೊಂದಿಗೆ, ಆತ್ಮೀಯರೊಂದಿಗೆ ಆಗಮಿಸಿ ಕೇಕ್ ಕತ್ತರಿಸಿ ಸಿಹಿ ತಿಂಡಿ ಮೋಜು ಮಸ್ತಿ ಮಾಡುವ ಮೂಲಕ ಹೊಸ ವರ್ಷದ ಶುಭಾಶಯಗಳು ಪರಸ್ಪರ ವಿನಿಮಯ ಮಾಡಿಕೊಂಡು.