ಸಂಡೂರು ಕ್ಷೇತ್ರದ ಟಿಕೆಟ್​ ಸಂಸದ ಇ ತುಕಾರಾಂ ಪತ್ನಿಗೆ

ಬೆಳಗಾಯಿತು ವಾರ್ತೆ |Www.belagayithu.in
ಮೈಸೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್​ 13 ರಂದು ಉಪಚುನಾವಣೆ ನಡೆಯಲಿದೆ. ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ಕಣ ಜಿದ್ದಾಜಿದ್ದಿಯಿಂದ ಕೂಡಿದೆ. ಸಂಡೂರು ವಿಧಾನಸಭಾ ಕ್ಷೇತ್ರದ ಟಿಕೆಟ್​ ನಿರೀಕ್ಷೆಯಂತೆ ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರಿಗೆ ಸಿಗುವುದು ಪಕ್ಕಾ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಸಂಡೂರು ಕ್ಷೇತ್ರದಲ್ಲಿ ಸಂಸದ ಇ ತುಕಾರಾಂ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್ ಕೊಡುತ್ತೇವೆ. ಉಳಿದ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿ ಫೈನಲ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಬಹುದು. ಇನ್ನು, ಬಿಜೆಪಿ ನಾಯಕ ಸಿಪಿ ಯೋಗೇಶ್ವರ್​​ ಕಾಂಗ್ರೆಸ್​ ಸೇರುವ ಬಗ್ಗೆ, ಅವರ ಜೊತೆ ನಾನು ಮಾತನಾಡಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಯಾರೇ ಬಂದರೂ ಸ್ವಾಗತ ಎಂದು ಹೇಳಿದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles