ಬೆಳಗಾಯಿತು ವಾರ್ತೆ | www.belagayithu.in
ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಸಂಸದ ಸಂಗಣ್ಣ ಕರಡಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ, ಬುಧವಾರ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಸವದಿಯವರು ಮಾತನಾಡಿ, ಕರಡಿ ಸಂಗಣ್ಣ ಅವರನ್ನು ನಾನೇ ದಳದಿಂದ ಬಿಜೆಪಿಗೆ ಸೇರಿಸಿದ್ದೆ . ಸರಳ, ಸಜ್ಜನಿಕೆಯ ನಾಯಕ. ಬಿಜೆಪಿ ಸುಮ್ಮನೆ ಅಬ್ಬರ ಮಾಡುತ್ತಿರುವ ಹೊತ್ತಿನಲ್ಲಿ ಅವರು ಕಾಂಗ್ರೆಸ್ ಸೇರುತ್ತಿದ್ದಾರೆ. ಏಕೆಂದರೆ ಕಾಂಗ್ರೆಸ್ ಪಕ್ಷದ ನೀತಿ, ಸಿದ್ಧಾಂತ, ಕಾರ್ಯಕ್ರಮಗಳನ್ನು ಅವರು ಮೆಚ್ಚಿದ್ದಾರೆ. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು ಬಿಜೆಪಿಯನ್ನು ರಾಜ್ಯದಲ್ಲಿ ತೊಳೆದು ಹಾಕುತ್ತಿವೆ. ಬೆಳಗಾವಿಯ ಗಾಂಧಿ ಬಾವಿಯಿಂದ ನೀರನ್ನು ತೆಗೆದು ಕೊಳೆ ತೊಳೆದಂತೆ, ರಾಜ್ಯದ ಜನತೆ ಬಿಜೆಪಿಯನ್ನು ಗುಡಿಸಿ ಹಾಕುತ್ತಾರೆ ಎಂದರು.





