ಮುಂಬೈ: ಶಿವಸೇನೆ ನಾಯಕ ಏಕನಾಥ್ ಶಿಂಧೆ, ಇತರ ಹಲವು ಶಾಸಕರೊಂದಿಗೆ ಮಂಗಳವಾರ ಬಂಡಾಯವೆದ್ದಿದ್ದು, ಪ್ರಮುಖ ರಾಜಕೀಯ ಪಕ್ಷಗಳ ತಲೆನೋವಿಗೆ ಕಾರಣವಾಗಿದೆ. ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿಕೂಟವು ಶಾಸಕರನ್ನು ಮರಳಿ ಕರೆತರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು ಈ ‘ಬಂಡಾಯ’ ಶಾಸಕರ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ.
ಈ ನಡುವೆ ಮಹಾರಾಷ್ಟç ಶಿವಸೇನಾ ಸಂಸದ ಸಂಜಯ್ ರಾವುತ್ ಅವರ ಒಂದು ಟ್ವೀಟ್ ಮಹಾರಾಷ್ಟç ರಾಜಕೀಯ ವಲಯದಲ್ಲಿ ಅಲ್ಲೋಲಕಲ್ಲೋಲ ಎಬ್ಬಿಸುವ ಸಾಧ್ಯತೆ ಹೆಚ್ಚಾಗಿದೆ. ರಾಜ್ಯದಲ್ಲಿ ಪ್ರಸ್ತುತ ರಾಜಕೀಯ ಬಿಕ್ಕಟ್ಟಿನ ಮಧ್ಯೆ ಮಹಾರಾಷ್ಟç ವಿಧಾನಸಭೆಯನ್ನು ವಿಸರ್ಜನೆ ಮಾಡುವ ಬಗ್ಗೆ ಶಿವಸೇನೆಯ ಸಂಜಯ್ ರಾವುತ್ ಸುಳಿವು ನೀಡಿದ್ದಾರೆ.
ಮಹಾರಾಷ್ಟçದಲ್ಲಿ ನಡೆಯುತ್ತಿರುವ ರಾಜಕೀಯ ಬಿಕ್ಕಟ್ಟು ವಿಧಾನಸಭೆ ವಿಸರ್ಜನೆಯತ್ತ ಸಾಗುತ್ತಿದೆ ಎಂದು ಸಂಸದ ಸಂಜಯ್ ರಾವುತ್ ಮರಾಠಿಯಲ್ಲಿ ಒಂದೇ ಸಾಲಿನ ಟ್ವೀಟ್ ಮಾಡಿದ್ದಾರೆ.