ಏ.21 ರಂದು ಪರಿಶಿಷ್ಟ ಪಂಗಡದವರ ಕುಂದು-ಕೊರತೆ ಸಭೆ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಸಮುದಾಯದ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಲು ಹಾಗೂ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಏ.21 ರಂದು ಬೆಳಿಗ್ಗೆ 11.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಪರಿಶಿಷ್ಟ ಪಂಗಡ ಸಮುದಾಯದವರ ಕುಂದು-ಕೊರತೆ ಸಭೆ ಆಯೋಜಿಸಲಾಗಿಸಿದೆ.
ಸಭೆಯಲ್ಲಿ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬAಧಿಸಿದ ವಿವಿಧ ಇಲಾಖೆಗಳ ಯೋಜನೆಗಳ ಅನುಷ್ಠಾನ, ಸಮುದಾಯದ ಮುಖಂಡರು ಎದುರಿಸುತ್ತಿರುವ ಕುಂದು-ಕೊರತೆಗಳು ಹಾಗೂ ಅಭಿವೃದ್ಧಿ ಪೂರಕ ವಿಷಯಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಾಗುವುದು.
ಜಿಲ್ಲೆಯ ಪರಿಶಿಷ್ಟ ಪಂಗಡದ ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿ, ತಮ್ಮ ಸಲಹೆ ಹಾಗೂ ಸಮಸ್ಯೆಗಳನ್ನು ಹಂಚಿಕೊಳ್ಳಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೊದ್ದೀನ್ ಅವರು ತಿಳಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles