ಶಾಲಾ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಿ: ತಹಶೀಲ್ದಾರ್ ಜೆ.ಸಿ.ವೆಂಕಟೇಶಯ್ಯ

0
185

ಚಿತ್ರದುರ್ಗ: ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ದೈನಂದಿನ ಶಾಲಾ ಲಸಿಕಾ ಕಾರ್ಯಕ್ರಮವು ಕುಂಠಿತಗೊAಡಿದ್ದು, ಈ ಬಾರಿ ಶಾಲಾ ಲಸಿಕಾ ಕಾರ್ಯಕ್ರಮದಲ್ಲಿ ಶೇ.100ರಷ್ಟು ಪ್ರಗತಿ ಸಾಧಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಸಹಕಾರ ನೀಡಬೇಕು ಎಂದು ತಹಶೀಲ್ದಾ ಜೆ.ಸಿ.ವೆಂಕಟೇಶಯ್ಯ ತಿಳಿಸಿದರು.
ನಗರದ ತಾಲ್ಲೂಕು ಕಚೇರಿಯಲ್ಲಿ ಸೋಮವಾರ ತಾಲ್ಲೂಕುಮಟ್ಟದ ದೈನಂದಿನ ಶಾಲಾ ಲಸಿಕಾ ಕಾರ್ಯಕ್ರಮದ ಚಾಲನಾ ಸಮಿತಿ ಸಭೆ ಹಾಗೂ ವಿಶ್ವ ಜನಸಂಖ್ಯಾ ದಿನಾಚರಣೆ ಅಂಗವಾಗಿ ಜನಸಂಖ್ಯೆ ನಿಯಂತ್ರಣ ಶಿಕ್ಷಣದ ಕುರಿತು ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಶಾಲಾ ಲಸಿಕಾ ಕಾರ್ಯಕ್ರಮಕ್ಕೆ ಸಂಬAಧಿಸಿದAತೆ ತಾಲ್ಲೂಕು ಆರೋಗ್ಯಾಧಿಕಾರಿಗಳು ನೀಡಿದ ಕ್ರಿಯಾ ಯೋಜನೆಯ ಅನ್ವಯ ದೈನಂದಿನ ಶಾಲಾ ಲಸಿಕಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದರು.
ದೈನಂದಿನ ಶಾಲಾ ಲಸಿಕೆಯ ಕುರಿತು ಆಯಾ ಶಿಕ್ಷಕರು ಮತ್ತು ಆಶಾ ಕಾರ್ಯಕರ್ತೆಯರು ಮಕ್ಕಳ ಪೋಷಕರಿಗೆ ಜಾಗೃತಿಯನ್ನು ಮೂಡಿಸಿ, ಮಕ್ಕಳಿಗೆ ಲಸಿಕೆ ಹಾಕಿಸುವಂತೆ ತಿಳಿಸಿದರು.
ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಮಾತನಾಡಿ, ಚಿತ್ರದುರ್ಗ ತಾಲ್ಲೂಕಿನಲ್ಲಿ 5 ರಿಂದ 6 ವರ್ಷದ 6843 ಮಕ್ಕಳಿಗೆ ಡಿಪಿಟಿ ಲಸಿಕೆ ಹಾಗೂ 10 ವರ್ಷದ 6893 ಮತ್ತು 16 ವರ್ಷದ 7455 ಮಕ್ಕಳಿಗೆ ಟಿಡಿ ಲಸಿಕೆ ಹಾಕಲು ಕ್ರಿಯಾ ಯೋಜನೆ ತಯಾರಿಸಲಾಗಿದೆ ಎಂದು ಹೇಳಿದರು.

Previous articleಅಕ್ರಮ ಪಂಪ್‌ಸೆಟ್‌ಗಳ ವಿರುದ್ಧ ಕ್ರಮ ಕೈಗೊಳ್ಳಿ: ಸಚಿವ ಆನಂದ ಸಿಂಗ್
Next articleಬ್ಯಾಕಿಂಗ್ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ನೀಡದೇ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಮಾಡುತ್ತಿದೆ

LEAVE A REPLY

Please enter your comment!
Please enter your name here