ಬೆಳಗಾಯಿತು ವಾರ್ತೆ | www.belagayithu.in
ಬಳ್ಳಾರಿ: ಲೋಕಸಭೆ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿ ಗುರುವಾರ ಸೂಕ್ತ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 124 ಸೀರೆ (ರೂ.2,79,100 ಮೌಲ್ಯದ) ಗಳನ್ನು ಜಪ್ತಿ ಮಾಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಅಬಕಾರಿ ಪೊಲೀಸ್ ಅಧಿಕಾರಿಗಳಿಂದ 85.38 ಲೀಟರ್ (ರೂ.41946 ಮೌಲ್ಯ) ಮದ್ಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಂದ 8.32 ಲೀಟರ್ (ರೂ.1920 ಮೌಲ್ಯ) ಮದ್ಯ ಸೇರಿದಂತೆ ಒಟ್ಟು 89.70 ಲೀಟರ್ ಮದ್ಯ (ರೂ.43,866 ಮೌಲ್ಯ) ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದು, ಇಲ್ಲಿಯವರೆಗೆ ಒಟ್ಟು 8 ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಜಿಲ್ಲೆಯಾದ್ಯಂತ ಚುನಾವಣೆಯ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು 16 ಫ್ಲೈಯಿಂಗ್ ಸ್ಕೋಡ್, 24 ಎಸ್‍ಎಸ್‍ಟಿ ತಂಡ ಮತ್ತು 7 ಅಬಕಾರಿ ತಂಡ ಕಾರ್ಯ ನಿರ್ವಹಿಸುತ್ತಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.