30.2 C
Bellary
Tuesday, May 7, 2024

Localpin

spot_img

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್

ಬೆಳಗಾಯಿತು ವಾರ್ತೆ |www.belagayithu.in
ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಎಫ್​ಐಆರ್ ದಾಖಲಾಗಿದೆ.
ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.
ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.
ಲೋಕಸಭಾ ಚುನಾವಣೆ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ. ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್‌ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles