ಮುಂಬೈ: ಬಿಜೆಪಿ ಬೆಂಬಲದೊAದಿಗೆ ಮಹಾರಾಷ್ಟçದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ ಅವರನ್ನು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಪಕ್ಷದ ಎಲ್ಲಾ ಹುದ್ದೆಗಳಿಂದ ತೆಗೆದುಹಾಕಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಕಾರಣ ಶಿಂಧೆ ಅವರನ್ನು ಪದಚ್ಯುತಗೊಳಿಸಲಾಗಿದೆ. ಶಿಂಧೆ ಅವರು ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿರುವುದರಿಂದ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಶಿವಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಏಕನಾಥ್ ಶಿಂಧೆ ಮಹಾರಾಷ್ಟçದ ೨೦ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಆದರೆ ಬಿಜೆಪಿಯ ದೇವೇಂದ್ರ ಫಡ್ನವಿಸ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.