ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ಸಿರುಗುಪ್ಪ ಮುಖ್ಯ ರಸ್ತೆಯ ಅರುಣೋದಯ ಆಸ್ಪತ್ರೆ ಮುಂಭಾಗದಲ್ಲಿರುವ ಡಾ. ಧರ್ಮಾ ರೆಡ್ಡಿ ಅವರ ಕಟ್ಟಡದಲ್ಲಿ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ನೂತನ ಯೋಜನಾ ಕಚೇರಿಯನ್ನು ಮಾಜಿ ಸಚಿವ ಶ್ರೀ ರಾಮುಲು ಅವರು ಶುಕ್ರವಾರ ಉದ್ಘಾಟಿಸಿದರು.
ಇದಕ್ಕೂ ಮುನ್ನ ಬೆಳಗ್ಗೆ 7ರಿಂದ 9 ಗಂಟೆಯವರೆಗೆ ಲಕ್ಷ್ಮೀ ಹಾಗೂ ಗಣ ಹೋಮ ಪೂಜಾ ವಿಧಿಗಳು ಭಕ್ತಿಭಾವದಿಂದ ನೆರವೇರಿದವು.
ಈ ಸಂದರ್ಭದಲ್ಲಿ ಮಾತನಾಡಿದ ಶ್ರೀರಾಮುಲು ಅವರು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಗ್ರಾಮೀಣ ಭಾಗಗಳಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದೆ. ಬಡ ಹಾಗೂ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಸಂಸ್ಥೆ ಕೈಗೊಂಡಿರುವ ಯೋಜನೆಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ರೋಹಿತ್, ಪಾಲಣ್ಣ, ಓಬಳೇಶ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.





