ಬೆಳಗಾಯಿತು ವಾರ್ತೆ| Www.belagayithu.in
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿರುವುದಾಗಿ ಸಿದ್ದರಾಮಯ್ಯ ಅವರು ಗುರುವಾರ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುತ್ತಲೇ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾಗಿ ಹೇಳಿದರು. ಆದರೆ ರಾಜ್ಯಪಾಲರು ಬೆಂಗಳೂರಿನಲ್ಲಿ ಇಲ್ಲದ ಕಾರಣ, ರಾಜೀನಾಮೆ ಪತ್ರವನ್ನು ಅವರ ಕಚೇರಿಯ ಕಾರ್ಯದರ್ಶಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.
ರಾಜೀನಾಮೆ ನೀಡಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಯಾವಾಗಲೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದು, ನಾಯಕರು ಸೂಚಿಸಿದಂತೆ ಗುರುವಾರವೇ ರಾಜೀನಾಮೆ ಸಲ್ಲಿಸಿರುವುದಾಗಿ ಸ್ಪಷ್ಟಪಡಿಸಿದರು.
‘ಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ಹೀಗಾಗಿ ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಇಂದು ನನ್ನ ರಾಜಿನಾಮೆ ನೀಡಿದ್ದೇನೆ.





