ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ 21ನೇ ವಾರ್ಡಿನ ಸಿದ್ಧಾರ್ಥ ನಗರದ ಕಾಲುವೆ ಸಮೀಪದ ಜನವಸತಿ ಪ್ರದೇಶಕ್ಕೆ ಶಾಸಕ ನಾರಾ ಭರತ್ ರೆಡ್ಡಿ ಬುಧವಾರ ಭೇಟಿ ನೀಡಿ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.
ಈ ವೇಳೆ ಸ್ಥಳೀಯರು ರಸ್ತೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಕಂಬಗಳಿಗೆ ಸಂಪರ್ಕ, ಬೀದಿ ದೀಪಗಳ ಕೊರತೆ ಹಾಗೂ ನೈರ್ಮಲ್ಯ ಸಮಸ್ಯೆಗಳ ಕುರಿತು ಶಾಸಕರ ಗಮನಕ್ಕೆ ತಂದರು. ಸಮಸ್ಯೆಗಳನ್ನು ಆಲಿಸಿದ ಶಾಸಕ ನಾರಾ ಭರತ್ ರೆಡ್ಡಿ, ಸಂಬಂಧಿಸಿದ ಅಧಿಕಾರಿಗಳಿಗೆ ಶೀಘ್ರ ಕ್ರಮ ಕೈಗೊಂಡು ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸೂಚಿಸಿದರು.
ಜನರಿಗೆ ಅಗತ್ಯ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಲು ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕೆಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಚಾನಾಳ್ ಶೇಖರ್, ಪಂಪಯ್ಯ ಹಿರೇಮಠ್, ಸೋಮಣ್ಣ, ಪರಶುರಾಮು, ವಿಜಯಲಕ್ಷ್ಮೀ, ಶೇಖರ್, ಶಾಮ್, ವಾಣಿ, ಪಂಪಣ್ಣ, ಪರುಶುರಾಮುಡು, ಹೊನ್ನಪ್ಪ ಹಾಗೂ ಅಧಿಕಾರಿಗಳಾದ ವೀರೇಶ್, ಶಿವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






