ಲಿಂಗಾಯತ ರೆಡ್ಡಿ ಸಮಾಜದಿಂದ ಆರು ಗಣ್ಯರಿಗೆ ಗೌರವ ಸನ್ಮಾನ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಬಸವ ಭವನದಲ್ಲಿ ವೀರಶೈವ ಲಿಂಗಾಯತ ರೆಡ್ಡಿ ಸಮಾಜದ ವತಿಯಿಂದ ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ ಅವರ 604ನೇ ಜಯಂತಿ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಆರು ಗಣ್ಯರನ್ನು ಗೌರವಿಸಿ ಸನ್ಮಾನಿಸಲಾಯಿತು.
ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಿಷ್ಕಿಂದ ವಿಶ್ವವಿದ್ಯಾಲಯದ ಕಲಾಧಿಪತಿ ಡಾ. ಯಶವಂತ ಭೂಪಾಲ್, ಸಾಮಾಜಿಕ ಕ್ಷೇತ್ರದ ಸೇವೆಗಾಗಿ ಸಂಗನಕಲ್ಲು ಬಸವರಾಜ್, ವೈದ್ಯಕೀಯ ಕ್ಷೇತ್ರದ ಸೇವೆಗಾಗಿ ಬಳ್ಳಾರಿ ಮೆಡಿಕಲ್ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಎನ್. ಮಂಜುನಾಥ, ನ್ಯಾಯಾಂಗ ಕ್ಷೇತ್ರದ ಸೇವೆಗಾಗಿ ಮಾಜಿ ಮೇಯರ್ ಪಾರ್ವತಿ ಇಂದುಶೇಖರ್, ಸಾವಯವ ಕೃಷಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಸಿಂದವಾಳ ಕೇಶವರಡ್ಡಿ ಹಾಗೂ ಮಾಧ್ಯಮ ಕ್ಷೇತ್ರದ ಸೇವೆಗಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ನಡವಿ ವೀರಭದ್ರಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಸಮಾಜದ ಅಧ್ಯಕ್ಷ ಡಾ. ಎಸ್.ಜೆ.ವಿ. ಮಹಿಪಾಲ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡೇದ ಬಸವರಾಜ್, ಸಂಗನಕಲ್ಲು ಹಿಂಮತರಾಜ್, ಜಾನೆಕುಂಟೆ ನೇಪಾಕ್ಷಪ್ಪ, ನೆಲ್ಲುಡಿ ಅಯ್ಯಪ್ಪ, ಸುರೇಖ ಮಲ್ಲನಗೌಡ, ಡಾ. ರೇಣುಕಾ ಮಂಜುನಾಥ, ಡಾ. ಭಾಗ್ಯಲಕ್ಷ್ಮಿ, ಸುಮಂಗಳಮ್ಮ ಬಸವರಾಜ್, ಸುಮಾರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಡಾ. ಬಸವರಾಜ್ ಗದಗಿನ ಹಾಗೂ ಮಿಂಚೇರಿ ನರೇಂದ್ರಬಾಬು ಸನ್ಮಾನಿತ ಗಣ್ಯರ ಪರಿಚಯ ಮಾಡಿಕೊಟ್ಟರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles