ಈ ಬಾರಿಯ ಐಪಿಎಲ್‌ನಲ್ಲಿ ಎಂಎಸ್ ಧೋನಿ ಪಡೆ ತನ್ನ ಅದ್ಭುತ ಪ್ರದರ್ಶನವನ್ನು ಮುಂದುವರಿಸಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತವಾದ ಪ್ರದರ್ಶನ ನೀಡುವ ಮೂಲಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆರಂಭದಲ್ಲಿ ಅನುಭವಿಸಿದ ಭಾರೀ ಕುಸಿತದಿಂದ ಮೇಲೆದ್ದು ಬಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಳಿಕ ಭರ್ಜರಿ ಗೆಲುವಿನ ಮೂಲಕ ಪಂದ್ಯವನ್ನು ಅಂತ್ಯಗೊಳಿಸುವಲ್ಲಿ ಯಶಸ್ವಿಯಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್‌ಗೆ 156 ರನ್‌ಗಳ ಸಾಧಾರಣ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಲು ವಿಫಲವಾದ ಮುಂಬೈ ಇಂಡಿಯನ್ಸ್ ತಂಡ 136 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲನ್ನು ಒಪ್ಪಿಕೊಂಡಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ಗೆಲುವನ್ನಾಚರಿಸಿದೆ. ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಆದರೆ ಚೆನ್ನೈ ತಂಡದ ನಾಯಕ ಧೋನಿಯ ನಿರ್ಧಾರ ಆರಂಭದಲ್ಲಿಯೇ ತಲೆಕೆಳಗಾಗಿತ್ತು. ತಂಡದ ಪ್ರಮುಖ ಆಟಗಾರರು ಕಳಪೆ ಸತತವಾಗಿ ವಿಕೆಟ್ ಕಳೆದುಕೊಳ್ಳಲು ಆರಂಭಿಸಿದರು. ಫಾಪ್ ಡುಪ್ಲೆಸಿಸ್, ಮೊಯೀನ್ ಅಲಿ, ಸುರೇಶ್ ರೈನಾ, ನಾಯಕ ಎಂಎಸ್ ಧೋನಿ ಒಬ್ಬರ ಹಿಂದೊಬ್ಬರಂತೆ ಫೆವಿಲಿಯನ್ ಸೇರಿಕೊಂಡಿದ್ದರು. ಈ ಮಧ್ಯೆ ಅಂಬಾಟಿ ರಾಯುಡು ಕೂಡ ಗಾಯಗೊಂಡು ಅಂಗಳದಿಂದ ಹೊರನಡೆದರು.
ಆದರೆ ಆರಂಬಿಕ ಆಟಗಾರನಾಗಿ ಕಣಕ್ಕಿಳಿದ ಋತುರಾಜ್ ಗಾಯಕ್ವಾಡ್ ಇನ್ನೊಂದು ತುದಿಯಲ್ಲಿ ಭದ್ರವಾಗಿ ನೆಲೆಯೂರಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ಯುವ ಆರಂಭಿಕ ಆಟಗಾರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಅಮೋಘ ಆಟವನ್ನು ಪ್ರದರ್ಶಿಸಿದರೆ. ನಿರ್ಣಾಯಕ ಸಮಯದಲ್ಲಿ ಅಮೋಘ ಪ್ರದರ್ಶನ ನೀಡಿದ ಋತುರಾಜ್ ಗಾಯಕ್ವಾಡ್ ತಂಡ ಸವಾಲಿನ ಮೊತ್ತ ಪೇರಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದರು. ಋತುರಾಜ್ ಗಾಯಕ್ವಾಡ್ ನೀಡಿದ ಅದ್ಭುತ ಪ್ರದರ್ಶನದಿಂದಾಗಿ ಚೆನ್ನೈ ಪಡೆ ಉತ್ತಮ ರನ್‌ಗಳಿಸಲು ಸಾಧ್ಯವಾಯಿತು. ಚೆನ್ನೈ ಸೂಪರ್ ಕಿಂಗ್ಸ್ ಯುವ ಆರಂಭಿಕ ಆಟಗಾರ ಮುಂಬೈ ಇಂಡಿಯನ್ಸ್ ವಿರುದ್ಧಧ ಪಂದ್ಯದಲ್ಲಿ ಅಮೋಘ ಆಟವನ್ನು ಪ್ರದರ್ಶಿಸಿದ್ದಾರೆ. ನಿರ್ಣಾಯಕ ಸಮಯದಲ್ಲಿ ಅಮೋಘ ಪ್ರದರ್ಶನ ನೀಡಿದ ಋತುರಾಜ್ ಗಾಯಕ್ವಾಡ್ ತಂಡ ಸವಾಲಿನ ಮೊತ್ತ ಪೇರಿಸುವಲ್ಲಿ ನಿರ್ಣಾಯಕ ಪಾತ್ರವಹಿಸಿದರು. ಈ ಮೂಲಕ ಯುಎಇನಲ್ಲಿ ನಡೆದ ಐಪಿಎಲ್‌ನಲ್ಲಿ ಸತತ ನಾಲ್ಕನೇ ಅರ್ಧ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ. ವಿಕೆಟ್ ಕಳೆದುಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಆರಂಭದಿಂದ ಎಚ್ಚರಿಕೆಯ ಆಟವನ್ನು ಆಡುತ್ತಾ ಸಾಗಿದ ಋತಿರಾಜ್ ಬಳಿಕ ರನ್‌ವೇಗವನ್ನು ಹೆಚ್ಚಿಸಿದರು. ಆಲ್‌ರೌಂಡರ್‌ಗಳಾದ ರವೀಂದ್ರ ಜಡೇಜಾ ಹಾಗೂ ಡ್ವೇಯ್ನ್ ಬ್ರಾವೋ ಕೂಡ ಬ್ಯಾಟಿಂಗ್‌ನಲ್ಲಿ ಉತ್ತಮ ಕೊಡುಗೆ ನೀಡಿದರು. ಹೀಗಾಗಿ ಸಣ್ಣ ಮೊತ್ತಕ್ಕೆ ಕುಸಿಯುವ ಭೀತಿಯಿಂದ ಚೆನ್ನೈ ಪಾರಾಯಿತು. ಐದನೇ ವಿಕೆಟ್‌ಗೆ ರವೀಂದ್ರ ಜಜೇಜಾ ಹಾಗೂ ಋತುರಾಜ್ ಗಾಯಕ್ವಾಡ್ ಮಹತ್ವದ ಜೊತೆಯಾಟವನ್ನು ನೀಡಿದರು.
ಎಚ್ಚರಿಕೆಯ ಹಾಗೂ ಸಮಯೋಚಿತ ಆಟ ಪ್ರದರ್ಶಿಸಿದರ ಈ ಜೋಡಿ 81 ರನ್‌ಗಳ ಭರ್ಜರಿ ಜೊತೆಯಾಟವನ್ನು ನೀಡಿತ್ತು. ಇದು ಚೆನ್ನೈ ಪಾಲಿಗೆ ಮಹತ್ವದ್ದಾಗಿತ್ತು. ಈ ಸಂದರ್ಭದಲ್ಲಿ 33 ಎಸೆತಗಳನ್ನು ಎದುರಿಸಿದ ರವೀಂದ್ರ ಜಡೇಜಾ 26 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. ಬಳಿಕ ಬಂದ ಡ್ವೇಯ್ನ್ ಬ್ರಾವೋ ಕೇವಲ 8 ಎಸೆತಗಳನ್ನು ಎದುರಿಸಿ 23 ರನ್‌ಗಳನ್ನು ಬಾರಿಸುವ ಮೂಲಕ ಅಂತಿಮ ಘಟ್ಟದಲ್ಲಿ ರನ್ ವೇಗವನ್ನು ಹೆಚ್ಚಿಸಿದರು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 156 ರನ್‌ಗಳಿಸಿತು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಬೋಲ್ಟ್, ಮಿಲ್ನೆ ಹಾಗೂ ಬೂಮ್ರಾ ತಲಾ 2 ವಿಕೆಟ್ ಪಡೆದರು. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ 157 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಕೂಡ ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿತು. 17 ರನ್‌ಗಳಿಸಿದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ನಂತರ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಅನ್ಮೋಲ್ ಪ್ರೀತ್ ಸಿಂಗ್ ಕೂಡ ತಂಡದ ಮೊತ್ತ 35 ರನ್ ಆಗುವಷ್ಟರಲ್ಲಿ ವಿಕೆಟ್ ಕಳೆದುಕೊಂಡರು.
ಅದಾದ ಬಳಿಕ ಸೂರ್ಯಕುಮಾರ್ ಯಾದವ್ ಕೂಡ 3 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು. ನಂತರ ಇಶಾನ್ ಕಿಶನ್, ಕಿರಾನ್ ಪೊಲಾರ್ಡ್ ಕೂಡ ಅಗ್ಗಕ್ಕೆ ವಿಕೆಟ್ ಕಳೆದುಕೊಂಡರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೌರಭ್ ತಿವಾರಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರಾದರೂ ಅದು ತಂಡದ ಗೆಲುವಿಗೆ ಸಹಕಾರಿಯಾಗಲಿಲ್ಲ. ಕೃನಾಲ್ ಪಾಂಡ್ಯ, ಆಡಂ ಮಿಲ್ನೆ ಕೂಡ ಅಗ್ಗಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 138 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲು ಒಪ್ಪಿಕೊಂಡಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ 157 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡ ಕೂಡ ಆರಂಭದಲ್ಲಿಯೇ ಆಘಾತವನ್ನು ಅನುಭವಿಸಿತು. 17 ರನ್‌ಗಳಿಸಿದ ಆರಂಭಿಕ ಆಟಗಾರ ಕ್ವಿಂಟನ್ ಡಿಕಾಕ್ ನಂತರ ಚೊಚ್ಚಲ ಐಪಿಎಲ್ ಪಂದ್ಯವನ್ನಾಡಿದ ಅನ್ಮೋಲ್ ಪ್ರೀತ್ ಸಿಂಗ್ ಕೂಡ ತಂಡದ ಮೊತ್ತ 35 ರನ್ ಆಗುವಷ್ಟರಲ್ಲಿ ವಿಕೆಟ್ ಕಳೆದುಕೊಂಡರು. ಅದಾದ ಬಳಿಕ ಸೂರ್ಯಕುಮಾರ್ ಯಾದವ್ ಕೂಡ 3 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡರು.
ನಂತರ ಇಶಾನ್ ಕಿಶನ್, ಕಿರಾನ್ ಪೊಲಾರ್ಡ್ ಕೂಡ ಅಗ್ಗಕ್ಕೆ ವಿಕೆಟ್ ಕಳೆದುಕೊಂಡರು. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೌರಭ್ ತಿವಾರಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರಾದರೂ ಅದು ತಂಡದ ಗೆಲುವಿಗೆ ಸಹಕಾರಿಯಾಗಲಿಲ್ಲ. ಕೃನಾಲ್ ಪಾಂಡ್ಯ, ಆಡಂ ಮಿಲ್ನೆ ಕೂಡ ಅಗ್ಗಕ್ಕೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 138 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲು ಒಪ್ಪಿಕೊಂಡಿದೆ. ಇನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರವಾಗಿ ಆರಂಭದಲ್ಲಿ ದೀಪಕ್ ಚಾಹರ್ 2 ವಿಕೆಟ್ ಕಿತ್ತು ಮಿಂಚದರೆ ಡ್ವೇಯ್ನ್ ಬ್ರಾವೋ 3 ವಿಕೆಟ್ ಕಬಳಿಸಿದ್ದಾರೆ. ಜೋಶ್ ಹೇಜಲ್‌ವುಡ್ ಹಾಗೂ ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆದುಕೊಂಡಿದ್ದಾರೆ. ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ಆಡುವ ಬಳಗದಿಂದ ಹೊರಗುಳಿದಿದ್ದರು. ಹೀಗಾಗಿ ಕಿರಾನ್ ಪೊಲಾರ್ಡ್ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದಾರೆ. ಮತ್ತೊಂದೆಡೆ ಹಾರ್ದಿಕ್ ಪಾಂಡ್ಯ ಕೂಡ ಆಡುವ ಬಳಗದಿಂದ ಹೊರಬಿದ್ದಿದ್ದರು.
ಈ ಮುಂಬೈ ಇಂಡಿಯನ್ಸ್ ವಿರುದ್ಧದ ಈ ಗೆಲುವಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಎರಡನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಇದ್ದು ಆರ್‌ಸಿಬಿ ಮೂರನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ನಾಲ್ಕನೇ ಸ್ಥಾನದಲ್ಲಿದೆ. ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಅನ್ಮೋಲ್ಪ್ರೀತ್ ಸಿಂಗ್, ಕೀರನ್ ಪೊಲಾರ್ಡ್ (ನಾಯಕ), ಸೌರಭ್ ತಿವಾರಿ, ಕೃನಾಲ್ ಪಾಂಡ್ಯ, ಆಡಮ್ ಮಿಲ್ನೆ, ರಾಹುಲ್ ಚಹರ್, ಜಸ್ಪ್ರೀತ್ ಬೂಮ್ರಾ, ಟ್ರೆಂಟ್ ಬೋಲ್ಟ್ ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಫಾಫ್ ಡು ಪ್ಲೆಸಿಸ್, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಸುರೇಶ್ ರೈನಾ, ಅಂಬಟಿ ರಾಯುಡು, ಎಂಎಸ್ ಧೋನಿ (ವಿಕೆಟ್ ಕೀಪರ್ ಮತ್ತು ನಾಯಕ), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ಶಾರ್ದೂಲ್ ಠಾಕೂರ್, ದೀಪಕ್ ಚಹರ್, ಜೋಶ್ ಹೇಜಲ್‌ವುಡ್