ಇಡೀ ಕ್ರಿಕೆಟ್ ಜಗತ್ತೇ ಕಾಯುತ್ತಿದ್ದ ಶ್ರೀಮಂತ ಫ್ರಾಂಚೈಸಿ ಕ್ರಿಕೆಟ್ ಲೀಗ್ ಆಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾಲ್ಕನೇ ಆವೃತ್ತಿಯ ದ್ವಿತೀಯಾರ್ಧ ಆರಂಭವಾಗಿದೆ. ಇದೇ ವರ್ಷದ ಏಪ್ರಿಲ್ 9ರಂದು ಭಾರತದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯದ ಮೂಲಕ ಆರಂಭವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ 29 ಪಂದ್ಯಗಳು ಮುಗಿಯುವ ತನಕ ಯಾವುದೇ ಅಡಚಣೆಗಳಿಲ್ಲದೆ ಸರಾಗವಾಗಿ ನಡೆದಿತ್ತು. ಆದರೆ ನಂತರದ ದಿನಗಳಲ್ಲಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಮತ್ತು ಸಿಬ್ಬಂದಿ ವರ್ಗದವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಕಾರಣ ಎಚ್ಚೆತ್ತ ಬಿಸಿಸಿಐ ಟೂರ್ನಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮುಂದೂಡಿತ್ತು.
ಹೀಗೆ ತಾತ್ಕಾಲಿಕವಾಗಿ ಸ್ಥಗಿತಗೊಂಡು ಮುಂದೂಡಲ್ಪಟ್ಟಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಉಳಿದ ಪಂದ್ಯಗಳನ್ನು ಇದೇ ಸೆಪ್ಟೆಂಬರ್ 19ರ ಭಾನುವಾರದಿಂದ ಪುನರ್ ಆರಂಭಿಸಲಾಗಿದೆ. ಹೀಗೆ ಮುಂದುವರಿದಿರುವ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ದ್ವಿತೀಯ ಭಾಗದ ಮೊದಲನೇ ಪಂದ್ಯದಲ್ಲಿ ಬಲಿಷ್ಠ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಸೆಣಸಾಟ ನಡೆಸಿದವು. ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಡೆಯಲಿರುವ ಈ ಪಂದ್ಯ ಟೂರ್ನಿಯ 30ನೇ ಪಂದ್ಯವಾಗಿದ್ದು ದುಬೈ ನಗರದಲ್ಲಿರುವ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದಿದೆ. ಹೀಗೆ ಸೆಪ್ಟೆಂಬರ್ 19ರ ಭಾನುವಾರದಂದು ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯವನ್ನು ವೀಕ್ಷಿಸಲು ಕನ್ನಡದ ಖ್ಯಾತ ಚಲನಚಿತ್ರ ನಟ ಕಿಚ್ಚ ಸುದೀಪ್ ಆಗಮಿಸಿದ್ದರು. ಹೌದು, ಇತ್ತೀಚೆಗಷ್ಟೇ ಐಪಿಎಲ್ ವೀಕ್ಷಿಸಲು ಕಿಚ್ಚ ಸುದೀಪ್ ದುಬೈ ಪ್ರಯಾಣವನ್ನು ಕೈಗೊಂಡಿದ್ದ ಸುದ್ದಿ ವೈರಲ್ ಆಗಿತ್ತು ಹಾಗೂ ದುಬೈಗೆ ಬಂದಿಳಿದ ಕಿಚ್ಚ ಸುದೀಪ್ ಅವರಿಗೆ ಆದರದ ಸ್ವಾಗತವನ್ನು ಕೋರಿದ ಚಿತ್ರಗಳು ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಇದೀಗ ಕಿಚ್ಚ ಸುದೀಪ್ ಮತ್ತು ಅವರ ಪತ್ನಿ ಪ್ರಿಯಾ ಸುದೀಪ್ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ನಡುವಿನ ಪಂದ್ಯವನ್ನು ಮೈದಾನಕ್ಕೆ ಆಗಮಿಸಿ ವೀಕ್ಷಿಸಿದ್ದು, ಕಿಚ್ಚ ಸುದೀಪ್ ಪಂದ್ಯವನ್ನು ವೀಕ್ಷಿಸುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಇನ್ನು ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅದ್ಭುತವಾದ ಪ್ರದರ್ಶನ ನೀಡುವ ಮೂಲಕ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ಆರಂಭದಲ್ಲಿ ಅನುಭವಿಸಿದ ಭಾರೀ ಕುಸಿತದಿಂದ ಮೇಲೆದ್ದು ಬಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಬಳಿಕ ಭರ್ಜರಿ ಗೆಲುವಿನ ಮೂಲಕ ಪಂದ್ಯವನ್ನು ಅಂತ್ಯಗೊಳಿಸುವಲ್ಲಿ ಯಶಸ್ವಿಯಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಮುಂಬೈ ಇಂಡಿಯನ್ಸ್‌ಗೆ 156 ರನ್‌ಗಳ ಸಾಧಾರಣ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಲು ವಿಫಲವಾದ ಮುಂಬೈ ಇಂಡಿಯನ್ಸ್ ತಂಡ 136 ರನ್‌ಗಳಿಗೆ 8 ವಿಕೆಟ್ ಕಳೆದುಕೊಂಡು ಸೋಲನ್ನು ಒಪ್ಪಿಕೊಂಡಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ಗೆಲುವನ್ನಾಚರಿಸಿದೆ.