ಬೆಳಗಾಯಿತು ವಾರ್ತೆ | Www.belagayithu.in
ಬಾಗಲಕೋಟೆ: ಜಿಲ್ಲೆಯಲ್ಲಿ ನಡೆದ ಶಿವಾಜಿ ಜಯಂತಿ ಮೆರವಣಿಗೆಯ ಮೇಲೆ ಕಲ್ಲು ತೂರಾಟ ಮತ್ತು ಚಪ್ಪಲಿ ಎಸೆದಿರುವ ಘಟನೆಯ ಬಗ್ಗೆ ಅಕ್ರೋಶದ ವ್ಯಕ್ತಪಡಿಸಿರುವ ಮಾಜಿ ಸಚಿವ ಹಾಗೂ ಸಂಸದ ಬಿ. ಶ್ರೀರಾಮುಲು, ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಕಳೆದ ಫೆಬ್ರವರಿ 19 ರಂದು ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಸಾಗುತ್ತಿದ್ದಾಗ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಮೆರವಣಿಗೆಯ ಮೇಲೆ ಚಪ್ಪಲಿ ಎಸೆಯುವ ಮೂಲಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ





