ಎಸ್ಸೆಸ್ಸೆಲ್ಸಿ ಫಲಿತಾಂಶ: ಎಂ.ಪ್ರಿಯಾಂಕಾ ಉತ್ತಮ ಸಾಧನೆ

ಬೆಳಗಾಯಿತು ವಾರ್ತೆ| www.belagayithu.in
ಬಳ್ಳಾರಿ: ನಗರದ ಸುಪ್ರಜಾ ದಕ್ಷಿಣ ಇಂಗ್ಲಿಷ್ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಎಂ. ಪ್ರಿಯಾಂಕಾ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ರಲ್ಲಿ 577 ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.
ಪ್ರಿಯಾಂಕಾ ಅವರ ತಂದೆ ಶ್ರೀ ಎಂ. ಚಿದಾನಂದ ಅವರು ರೆಡಿಮೇಡ್ ಗಾರ್ಮೆಂಟ್ಸ್ ಉದ್ಯಮಿಯಾಗಿದ್ದು, ಕೋವಿಡ್ ನಂತರ ವ್ಯವಹಾರದಲ್ಲಿ ಹಿನ್ನಡೆಯನ್ನು ಅನುಭವಿಸಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಇಂತಹ ಸಂಕಷ್ಟದ ನಡುವೆಯೂ ಪ್ರಿಯಾಂಕಾ ತಮ್ಮ ಪರಿಶ್ರಮ ಮತ್ತು ದೃಢಸಂಕಲ್ಪದ ಮೂಲಕ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡಿರುವುದು ಗಮನಾರ್ಹವಾಗಿದೆ.
ಆರ್ಥಿಕ ಸಮಸ್ಯೆಗಳು ಇದ್ದರೂ ಶಿಕ್ಷಣದಲ್ಲಿ ಯಶಸ್ಸು ಸಾಧಿಸಲು ಸಾಧ್ಯವೆಂಬುದನ್ನು ಪ್ರಿಯಾಂಕಾ ತಮ್ಮ ಸಾಧನೆಯ ಮೂಲಕ ಸಾಬೀತುಪಡಿಸಿದ್ದಾರೆ. ಅವರ ಸಾಧನೆಗೆ ಶಿಕ್ಷಕರು, ಪೋಷಕರು ಹಾಗೂ ಸ್ನೇಹಿತರು ಅಭಿನಂದನೆ ವ್ಯಕ್ತಪಡಿಸಿದ್ದಾರೆ.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles