ಬೆಳಗಾಯಿತು ವಾರ್ತೆ| Www.belagayithu.in
ಬಳ್ಳಾರಿ: ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (AIKKMS) ಬಳ್ಳಾರಿ ಜಿಲ್ಲಾ ಸಮಿತಿಯ ವತಿಯಿಂದ ಜುಲೈ 20ರಂದು ನಡೆಯಲಿರುವ ರಾಜ್ಯವ್ಯಾಪಿ ಪ್ರತಿಭಟನೆ ಕುರಿತು ಬಳ್ಳಾರಿ ತಾಲೂಕಿನ ಎತ್ತಿನಬೂದಿಹಾಳ ಹಾಗೂ ಕುರುಗೋಡು ತಾಲೂಕಿನ ಕೋಳೂರು ಗ್ರಾಮಗಳಲ್ಲಿ ಪ್ರಚಾರ ನಡೆಸಲಾಯಿತು.
ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಗೋವಿಂದ್ ಮಾತನಾಡಿ, ಜುಲೈ 20ರಂದು ಬೆಳಿಗ್ಗೆ 10.30ಕ್ಕೆ ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಕರ್ನಾಟಕವನ್ನು ಬರಪೀಡಿತ ರಾಜ್ಯವೆಂದು ಘೋಷಿಸಬೇಕು, ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು, ಬೆಳೆ ನಷ್ಟಕ್ಕೆ ಪ್ರತಿ ಎಕರೆಗೆ 50,000 ಪರಿಹಾರ ನೀಡಬೇಕು, ವರ್ಷಪೂರ್ತಿ ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕೆಲಸ ಸಿಗುವಂತೆ ಶಾಶ್ವತ ವ್ಯವಸ್ಥೆ ಕಲ್ಪಿಸಬೇಕು ಹಾಗೂ ದನಕರುಗಳಿಗೆ ಸಮರ್ಪಕ ಮೇವಿನ ವ್ಯವಸ್ಥೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಘದ ಮುಖಂಡರಾದ ಹನುಮಂತಪ್ಪ, ಬಸಣ್ಣ, ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಪಂಪಾಪತಿ, ಭೀಮ, ಬಸವರಾಜ್, ಶಂಕ್ರಪ್ಪ, ಆಶೋಕ, ಗಿರಿಮಲ್ಲ, ರಾಮಣ್ಣ, ಮೇಘರಾಜ್, ಕಪ್ಪಗಲ್ ರಾಜೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.





