ಬೆಳಗಾಯಿತು ವಾರ್ತೆ
ಬಳ್ಳಾರಿ : ಅಮೃತ ಭಾರತಿಗೆ ಕನ್ನಡದಾರತಿ ಅಭಿಯಾನದ ಅಂಗವಾಗಿ ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿ ಎದುರುಗಡೆಯ ರೈಲ್ವೆ ನಿಲ್ದಾಣದ ಬಳಿ ಮಹಾತ್ಮಾಗಾಂಧೀಜಿ ಅವರ ಪ್ರತಿಮೆಯನ್ನು ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಅನಾವರಣಗೊಳಿಸಿದರು.
ನಂತರ ಮಾತನಾಡಿದ ಅವರು ಬಳ್ಳಾರಿಗೆ ರಾಷ್ಟ್ರಪಿತ ಮಹಾತ್ಮಗಾಂಧೀಜಿ ಅವರು ಭೇಟಿ ನೀಡಿ ರೈಲ್ವೆ ನಿಲ್ದಾಣದಲ್ಲಿ ತಂಗಿ ಸ್ವಾತಂತ್ರ್ಯ ಹೋರಾಟದ ಕುರಿತು ಸುದೀರ್ಘ ಚರ್ಚೆ ನಡೆಸಿದ ನೆನಪಿಗೆ ಪುತ್ಥಳಿಯನ್ನು ಬಳ್ಳಾರಿ ಜಿಲ್ಲಾಡಳಿತ ನಿರ್ಮಿಸಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಜಿ.ಸೋಮಶೇಖರ್ ರೆಡ್ಡಿ,ವೈ.ಎಂ.ಸತೀಶ್, ಸಂಸದ ವೈ.ದೇವೇಂದ್ರಪ್ಪ, ಮಹಾನಗರ ಪಾಲಿಕೆ ಮೇಯರ್ ರಾಜೇಶ್ವರಿ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹನುಮಂತಪ್ಪ,ಬುಡಾ ಅಧ್ಯಕ್ಷ ಪಾಲನ್ನ, ಎಪಿಎಂಸಿ ಅಧ್ಯಕ್ಷ ಉಮೇಶ,ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಜಿ.ಲಿಂಗಮೂರ್ತಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಇದ್ದರು.