ಬೆಳಗಾಯಿತು ವಾರ್ತೆ
ಬಳ್ಳಾರಿ: ಜನ ಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಸೆ.21 ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು ಈ ಹೋರಾಟಕ್ಕೆ ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಕೀಲರ ಮೀಸಲಾತಿ ಹೋರಾಟ ವೇದಿಕೆ ಬೆಂಬಲಿಸಲಿದೆ ಎಂದು ಹಿರಿಯ ವಕೀಲರಾದ ಜಯರಾಂ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜನ ಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರಸನ್ನಾನಂದ ಪುರಿಗಳ ಧರಣಿ ಸತ್ಯಾಗ್ರಹ ೨೨೩ ದಿನ ಆದರೂ ರಾಜ್ಯ ಸರ್ಕಾರ ಇದೂವರೆಗೂ ಮೀಸಲಾತಿ ಹೆಚ್ಚಳ ಮಾಡಿಲ್ಲ ಇದನ್ನು ಖಂಡಿಸಿ ಬಳ್ಳಾರಿ ಜಿಲ್ಲೆಯ ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಹೋರಾಟ ಕ್ರಿಯಾ ಸಮಿತಿಯಿಂದ ಸೆ.21ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ದಿನದ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ. ಈ ಹೋರಾಟಕ್ಕೆ ಬಳ್ಳಾರಿ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ವಕೀಲರ ಮೀಸಲಾತಿ ಹೋರಾಟ ವೇದಿಕೆ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲಾ ಮತ್ತು ತಾಲೂಕು ಮಟ್ಟದ ವಿವಿಧ ಸಂಘ ಸಂಸ್ಥೆಗಳು ಸಮುದಾಯದ ಮುಖಂಡರು ಬೆಂಬಲ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಜಿಲ್ಲಾ ಎಸ್ ಸಿ ಮತ್ತು ಎಸ್ ಟಿ ಮೀಸಲಾತಿ ಹೋರಾಟ ವೇದಿಕೆ ಜಿಲ್ಲಾಧ್ಯಕ್ಷ ಹಾಗೂ ವಕೀಲರಾದ ಕೆ.ಗವಿ ಶಿದ್ದಪ್ಪ, ಹಿರಿಯ ವಕೀಲರಾದ ಬಾದಾಮಿ ಶಿವಲಿಂಗ, ಎಮ್ ನಾಗರಾಜ್ ನಾಯಕ, ಸುರೇಶ್ ನಾಯಕ, ಪ್ರಕಾಶ್, ನಾಗರತ್ನ, ಹೊಸಳ್ಳಿ ಶೇಖರ, ಕೆ. ಭಾಸ್ಕರ್, ರುದ್ರ ಮುನಿ, ಶಿಖಾಮಣಿ ನಾಯಕ, ಸೇರಿದಂತೆ ಇತರರು ಇದ್ದರು.
ಜನ ಸಂಖ್ಯೆಗೆ ಅನುಗುಣವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಸಂಬಂಧಿಸಿದಂತೆ ಸರ್ಕಾರ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡೋಕೆ ಸರ್ಕಾರ ಮೀನಾಮೇಷ ಎಣಿಸುತ್ತಿದೆ, ಮೀಸಲಾತಿ ಹೆಚ್ಚಳ ಮಾಡದ ಪಕ್ಷದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಜನರು ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ. ಜಯರಾಂ ಹಿರಿಯ ವಕೀಲರು