ಬೆAಗಳೂರು: ಇತ್ತೀಚಿನ ದಿನಗಳಲ್ಲಿ ಪೋಷಕರಲ್ಲಿ ಮಕ್ಕಳಿಗೆ ಇಂಗ್ಲೀಷ್ ವಿದ್ಯಾಭ್ಯಾಸ ನೀಡಬೇಕೆಂಬ ದೃಷ್ಟಿಯಿಂದ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮ ಶಾಲೆಗೆ ಕಳುಹಿಸುತ್ತಿದ್ದಾರೆ. ಇದರಿಂದ ಕನ್ನಡ ಮಾಧ್ಯಮದಲ್ಲಿ ಕಲಿಯುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಯುತ್ತಲೇ ಇದೆ.
ಈ ಕುರಿತಾಗಿ ರಾಷ್ಟಿçÃಯ ಸಾಧನ ಸಮೀಕ್ಷೆ ವರದಿ ಮಾಡಿದ್ದು, ವರ್ಷದಿಂದ ವರ್ಷಕ್ಕೆ ಕನ್ನಡ ಮಾಧ್ಯಮದಲ್ಲಿ ಕಲಿಯುವವರ ಪ್ರಮಾಣ ಕಡಿಮೆಯಾಗುತ್ತಿದೆ ಎಂದು ಹೇಳಿದೆ. ಈ ಕುರಿತಾಗಿ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣ ಕೂ ವೇದಿಕೆಯಲ್ಲಿ #ಕನ್ನಡಮಾಧ್ಯಮಕಲಿಕೆ ಎಂಬ ಹ್ಯಾಷ್ ಟ್ಯಾಗ್ ಅಡಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದಾರೆ.