ಬೆಂಗಳೂರು -ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ‘ಲವ್ ಯೂ ರಚ್ಚು’ ಚಿತ್ರದ ಚಿತ್ರೀಕರಣದ ಸಂದರ್ಭದಲ್ಲಿ ಹೈಟೆನ್ಷನ್ ವಿದ್ಯುತ್ ತಂತಿಗೆ ಮೆಟಲ್ ರೋಪ್ ತಗುಲಿ ಸಹಾಯಕ ಫೈಟ್ ಮಾಸ್ಟರ್ ಸಾವನ್ನಪ್ಪಿದ್ದಾರೆ. ಮೃತನನ್ನು ತಮಿಳುನಾಡು ಮೂಲದ ವಿವೇಕ್(35) ಎಂದು ಗುರುತಿಸಲಾಗಿದೆ. ಅವಘಡದಲ್ಲಿ ಒಟ್ಟು ಇಬ್ಬರು ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ವಿವೇಕ್ ಮೃತರಾಗಿದ್ದರೆ, ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಗೆ ಸಂಬಂಧಿಸಿ ನಿರ್ದೇಶಕ ಶಂಕರ್ ರಾಜ್ , ಪ್ರಮುಖ ಫೈಟ್ ಮಾಸ್ಟರ್ ವಿನೋದ್ ಎಂಬುವರನ್ನು ಬಿಡದಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಗೂ ಚಿತ್ರತಂಡಕ್ಕೆ ನೋಟಿಸ್ ನೀಡಿ ಮಾಹಿತಿ ಕೊಡಲು ಸೂಚಿಸಿದ್ದಾರೆ. ಮುಂಜಾಗ್ರತಾ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಹಂತದಲ್ಲಿ ತಿಳಿದುಬಂದಿದೆ. ಈ ಹಿಂದೆ ನಾಗಶೇಖರ್ ನಿರ್ದೇಶನದ ದುನಿಯಮಾಸ್ತಿಗುಡಿ ಚಿತ್ರೀಕರಣದ ವೇಳೆ ಇಬ್ಬರು ಪ್ರತಿಭಾವಂತ ನಟರನ್ನು ಕಳೆದುಕೊಂಡ ನಂತರ, ಇದೀಗ ಮತ್ತೊಂದು ದುರಂತ ಸಂಭವಿಸಿದೆ.