ಬೆಳಗಾಯಿತು ವಾರ್ತೆ
ಬಳ್ಳಾರಿ: ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವು ದಿನಗಳು ಮಾತ್ರಾ ಉಳಿದಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ.
ಇಗಾಗಲೆ ಹಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇನ್ನೂ ಕೆಲವು ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಮಾಡುತ್ತಿದ್ದಾರೆ.
ಬಳ್ಳಾರಿ ನಗರ ಕ್ಷೇತ್ರದ ನೂತನ ಪಕ್ಷವಾದ ಕೆಆರ್ ಪಿಪಿ ವತಿಯಿಂದ ಸೋಮವಾರ ಜಿ. ಲಕ್ಷ್ಮೀ ಅರುಣಾ ಅವರು ಅಪಾರ ಅಭಿಮಾನಿಗಳೊಂದಿಗೆ ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಳ್ಳಾರಿ ಅದಿ ದೇವತೆ ಶ್ರೀಕನಕ ದುರ್ಗಮ್ಮ ದೇವಿಯ ಆಶಿರ್ವಾದ ಪಡೆದು ಮೆರವಣಿಗೆ ಮೂಲಕ ಬಂದು ನಾಮಪತ್ರ ಸಲ್ಲಿಸಿದರು.