ಬೆಂಗಳೂರು: ಎಚ್. ಡಿ ಕುಮಾರಸ್ವಾಮಿರವರು ಅಂಬರೀಶ್ ಹೆಸರು ದುರ್ಬಳಕೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ವಿರುದ್ಧ . ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದೆ ಸುಮಲತಾ ಅಂಬರೀಷ್ ಭಾವುಕರಾಗಿ ಮಾತನಾಡುತ್ತಾ, ಅಂಬರೀಶ್ ಹೆಸರು ಹೇಳಲು ಯೋಗ್ಯತೆ ಇಲ್ಲದವರು ಇಂದು ಹೆಸರು ಬಳಸಿ ರಾಜಕೀಯ ಮಾಡುತ್ತಿದ್ದಾರೆ. ಅಂಬರೀಶ್ ಕಾಲದಲ್ಲೇ ಅಕ್ರಮ ನಡೆದಿತ್ತು ಎಂದು ಆರೋಪ ಮಾಡುತ್ತಿದ್ದಾರೆ ಅಂಬರೀಶ್ ಕಾಲದಲ್ಲಿ ಅಕ್ರಮ ನಡೆದಿದ್ದರೆ ದಾಖಲೆ ಸಮೇತ ದೂರು ನೀಡಲಿ, ಇಷ್ಟು ದಿನ ಸುಮ್ಮನೆ ಇದ್ದಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.