ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ

ಬೆಳಗಾಯಿತು ವಾರ್ತೆ | Www.belagayithu.in
ನವದೆಹಲಿ: ಬಾಗೇಪಲ್ಲಿಯ ಎನ್.ಎಸ್ ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
ಎದುರಾಳಿ, ಚುನಾವಣಾ ಆಯೋಗ ಮತ್ತು ಸಂಬಂಧಪಟ್ಟ ವ್ಯಕ್ತಿಗಳಿಗೆ ಅಫಿಡವಿಟ್, ಕೌಂಟರ್ ಅಫಿಡವಿಟ್ ಸಲ್ಲಿಸಲು ಸುಪ್ರೀಂ ಕೋರ್ಟ್ 6 ವಾರಗಳ ಕಾಲಾವಕಾಶ ನೀಡಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳಿಸಿದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ನ ಎಸ್.ಎನ್. ಸುಬ್ಬಾರೆಡ್ಡಿ ಅವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.
ಸುಬ್ಬಾ ರೆಡ್ಡಿ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್‌ ಹಾಗೂ ನ್ಯಾಯಮೂರ್ತಿ ಜಾಯ್‌ಮಲ್ಯ ಬಾಗ್ಚಿ ಪೀಠವು ನಡೆಸಿತು. ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles