33.6 C
Bellary
Tuesday, May 14, 2024

Localpin

spot_img

ನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಕ್ರಮ ವಹಿಸಿ

ಬಳ್ಳಾರಿ: ನಗರದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಕ್ಕೆ ಹೆಚ್ಚಿನ ಆದ್ಯತೆ ನೀಡಿ ಬಳ್ಳಾರಿ ನಗರವನ್ನು ಸುಂದರವಾಗಿಡಲು ಪಾಲಿಗೆ ಅಧಿಕಾರಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕ್ರೀಡಾ ಸಚಿವ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ನ ನಜೀರ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪಾಲಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಈ ಹಿಂದಿನ ಕೆಲವು ಕಾಮಗಾರಿಗಳನ್ನು ಯಾವುದೇ ಕಾರಣಕ್ಕೂ ತಡ ಮಾಡದೇ ಅತಿ ಶೀಘ್ರದಲ್ಲಿ ಕಾಮಗಾರಿಗಳನ್ನು ಮುಗಿಸಬೇಕು ಎಂದರು.

ಬಳ್ಳಾರಿ ನಗರವನ್ನು ಸುಂದರವಾಗಿ ಇಟ್ಟುಕೊಳ್ಳಲು ಮೊದಲು ನೈರ್ಮಲ್ಯ ದಿಂದ ಇರಬೇಕಾಗುತ್ತದೆ. ಹಾಗಾಗಿ ಪ್ರತಿ ತಿಂಗಳು ನಗರದ ಪ್ರತಿ ವಾರ್ಡ್ ಗಳಲ್ಲಿ ನೈರ್ಮಲ್ಯ ದಿನವನ್ನಾಗಿ ಮಾಡಲಾಗುವು. ಇದರಿಂದ ವಾರ್ಡ್ಗಳಲ್ಲಿ ಸ್ವಚ್ಛತೆ ಕಾಪಾಡಲು ಅನುಕೂಲವಾಗುತ್ತದೆ ಎಂದರು.
ನಗರದಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುತ್ತಿರುವುದು ಕಂಡು ಬರುತ್ತಿದೆ. ಅದಕ್ಕೆ ಆದಷ್ಟು ಬೇಗ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಅವರು ನಮ್ಮ ಆಡಳಿತದ ಅವಧಿಯಲ್ಲಿ ಯಾವುದೇ ರೀತಿಯ ನ್ಯೂನತೆ ಕಂಡುಬರದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.
ನಗರವನ್ನು ಸ್ವಚ್ಛತೆಯಿಂದ ಇಡಲು ಲೇಬರ್ ಕೊರತೆ ಇದ್ದು, ಡಿಎಂಫ್ ಅಡಿಯಲ್ಲಿ ಲೇಬರ್ ಗಳನ್ನು ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳೊಂದೆ ಚರ್ಚೆ ಮಾಡಿ ಅವಕಾಶ ಇದ್ದರೆ ಲೇಬರ್ ಗಳನ್ನು ತೆಗೆದುಕೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಶಾಸಕ ನಾರಾ ಭರತ್ ರೆಡ್ಡಿ,
ಮೇಯರ್ ಡಿ. ತ್ರಿವೇಣಿ, ಉಪಮೇಯರ್ ಜಾನಕಿ,
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಪಾಲಿಕೆ ಆಯುಕ್ತರಾದ ಬಿ. ಖಲೀಲ್ ಸಾಬ್, ಮಹಾನಗರ ಪಾಲಿಕೆ ಸದಸ್ಯ ನೂರ್ ಮಹಮ್ಮದ್, ಹನುಮಂತ ಗುಡಿಗಂಟಿ,ವಿ.ಕುಭೇರ, ವಿವೇಕ್ ಸೇರಿದಂತೆ ಪಾಲಿಕೆ ಸದಸ್ಯರು ಹಾಗೂ ಇಲಾಖೆ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

Related Articles

Stay Connected

53,222FansLike
67,874FollowersFollow
12,303FollowersFollow
105,423SubscribersSubscribe
- Advertisement -spot_img

Latest Articles